ನಾಳೆ ದೇಶಾದ್ಯಂತ ವೈದ್ಯರ ಮುಷ್ಕರಕ್ಕೆ ಕರೆ
ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿರುವ ರಾಷ್ಟ್ರೀಯ ವೈದ್ಯಕೀಯ ಆಯೋಗ(ಎನ್ಎಂಸಿ) ವಿಧೇಯಕವನ್ನು ವಿರೋಧಿಸಿ ಬುಧವಾರ ವೈದ್ಯರು ಮುಷ್ಕರಕ್ಕೆ ಕರೆ ನೀಡಿದ್ದಾರೆ.
ಕೇಂದ್ರ ಸರ್ಕಾರದ ಎನ್ಎಂಸಿ ಬಿಲ್ ಖಂಡಿಸಿ ಇಂಡಿಯನ್ ಮೆಡಿಕಲ್ ಅಸೋಷಿಯೇಷನ್(ಐಎಂಎ) ದೇಶಾದ್ಯಂತ ವೈದ್ಯರ ಮುಷ್ಕರಕ್ಕೆ ಕರೆ ನಿಡಿದ್ದು, ಸುಮಾರು 24 ಗಂಟೆಗಳ ಕಾಲ ಮುಷ್ಕರ ನಡೆಸಲು ತೀರ್ಮಾನಿಸಲಾಗಿದೆ.

ನಾಳೆಯಿಂದ 24 ಗಂಟೆಗಳ ಕಾಲ ದೇಶಾದ್ಯಂತ ವೈದ್ಯರ ಮುಷ್ಕರ ನಡೆಯಲಿದ್ದು, ಬಹುತೇಕ ಖಾಸಗಿ ಆಸ್ಪತ್ರೆಯ ಒಪಿಡಿ ಸಾರ್ವಜನಿಕ ಸೇವೆಗೆ ಲಭ್ಯವಾಗುವುದಿಲ್ಲ. ಬುಧವಾರ ಬೆಳಗ್ಗೆ ಆರು ಗಂಟೆಯಿಂದ ಗುರುವಾರ ಬೆಳಗ್ಗೆ ಆರು ಗಂಟೆಯವರೆಗೆ ಮುಷ್ಕರ ನಡೆಯಲಿದ್ದು, ವೈದ್ಯರ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.
ರಾಜ್ಯದ್ಯಾಂತ ಸುಮಾರು 4500 ಖಾಸಗಿ ಆಸ್ಪತ್ರೆಗಳ ಓಪಿಡಿ ಬಂದ್ ಆಗುವ ಸಾಧ್ಯತೆಯಿದೆ. ಬುಧವಾರ ಬೆಳಗ್ಗೆ 6 ಗಂಟೆಯಿಂದ ಗುರುವಾರ ಬೆಳಗ್ಗೆ 6 ಗಂಟೆಯವರೆಗೆ ಬಹುತೇಕ ಬಂದ್ ಇರಲಿದ್ದು, ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಗಳು ಸೇರಿ ಒಟ್ಟು 600 ಆಸ್ಪತ್ರೆಗಳ ಓಪಿಡಿ ಬಂದ್ ಆಗಲಿದೆ. ಮುಷ್ಕರದಿಂದ ಹೌಸ್ ಸರ್ಜನ್ಸ್, ಮಡಿಕಲ್ ವಿದ್ಯಾರ್ಥಿಗಳಿಗೆ ಹಾಗೂ ರೋಗಿಗಳಿಗೆ ತೊಂದರೆಯಾಗಲಿದೆ.
rd
|