ಬುಡಕಟ್ಟು ಕಾರ್ಮಿಕರ ಧರಣಿ ಸತ್ಯಾಗ್ರಹ : 2 ತಿಂಗಳೊಳಗೆ ಬೇಡಿಕೆ ಈಡೇರಿಕೆ : ಡಿಸಿ ಭರವಸೆ


ಮಡಿಕೇರಿ ಜು.4 :
ಅರಣ್ಯ ಮತ್ತು ವನ್ಯಜೀವಿ ಕಾಯ್ದೆಗಳ ಹಿನ್ನೆಲೆಯಲ್ಲಿ ಅರಣ್ಯ ಪ್ರದೇಶಗಳಿಂದ ಹೊರ ಬಂದು, ಕಾಫಿ ತೋಟಗಳ ಲೈನ್ ಮನೆಗಳಲ್ಲಿ ಬದುಕು ಸವೆಸುತ್ತಿರುವ ಬುಡಕಟ್ಟು ಸಮುದಾಯಕ್ಕೆ ಅಗತ್ಯ ನಿವೇಶನ ಮತ್ತು ಹಕ್ಕುಪತ್ರವನ್ನು ನೀಡಬೇಕೆಂದು ಒತ್ತಾಯಿಸಿ ಕೊಡಗು ಜಿಲ್ಲಾ ಬುಡಕಟ್ಟು ಕಾರ್ಮಿಕರ ಸಂಘದ ನೇತೃತ್ವದಲ್ಲಿ ಆದಿವಾಸಿಗಳು ಮಡಿಕೇರಿಯ ಗಿರಿಜನ ಅಭಿವೃದ್ಧಿ ಇಲಾಖೆ ಕಛೇರಿ ಎದುರು ಧರಣಿ ಸತ್ಯಾಗ್ರಹ ನಡೆಸಿದರು.


ದಕ್ಷಿಣ ಕೊಡಗು ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳ ತೋಟಗಳ ಲೈನ್ ಮನೆಗಳಲ್ಲಿ ನೆಲೆಸಿರುವ ಆದಿವಾಸಿಗಳು, ನಿವೇಶನ ಮತ್ತು ಹಕ್ಕುಪತ್ರಕ್ಕಾಗಿ ನಿರಂತರವಾಗಿ ಅರ್ಜಿ ಸಲ್ಲಿಸುತ್ತಲೇ ಬಂದಿದ್ದಾರೆ. ಮೊದಲ ಹಂತದಲ್ಲಿ 150 ಕುಟುಂಬಗಳಿಗೆ ಶಾಶ್ವತ ನೆಲೆ ಒದಗಿಸಬೇಕು ಮತ್ತು 3 ಸಾವಿರಕ್ಕೂ ಹೆಚ್ಚಿನ ಆದಿವಾಸಿ ಕುಟುಂಬಗಳ ಬದುಕಿಗೆ ನೆಲೆಯೊದಗಿಸಲು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಧರಣಿ ಆರಂಭಿಸಿರುವುದಾಗಿ ಬುಡಕಟ್ಟು ಕಾರ್ಮಿಕರ ಸಂಘದ ಕಾರ್ಯದರ್ಶಿ ಶೈಲೇಂದ್ರ ಕುಮಾರ್ ತಿಳಿಸಿದರು. ಐಟಿಡಿಸಿ ಅಧಿಕಾರಿಗಳು ಪ್ರತಿಭಟನಾಕಾರರ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಾರೆ, ‘ಆದಿವಾಸಿಗಳಿಗೆ ನಿವೇಶನ ಮತ್ತು ಹಕ್ಕು ಪತ್ರ ಒದಗಿಸುವುದು ನಮ್ಮ ವ್ಯಾಪ್ತಿಗೆ ಬರುವಂತಹದ್ದಲ್ಲ’ ಎಂದು ದರ್ಪದ ಉತ್ತರ ನೀಡಿದ್ದಾರೆ. ಅಲ್ಲದೆ ಸ್ಥಳದಿಂದ ತೆರಳುವಂತೆ ಬೆದರಿಸಿರುವುದಾಗಿ ಬುಡಕಟ್ಟು ಕಾರ್ಮಿಕರ ಸಂಘದ ಪದಾಧಿಕಾರಿಗಳಾದ ಉಷಾ ಹಳ್ಳಿಗಟ್ಟು, ಲಲಿತಾ ಮೊದಲಾದವರು ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.


ಬುಧವಾರ ರಾತ್ರಿ ಐಟಿಡಿಸಿ ಕಛೇರಿ ಆವರಣದಲ್ಲಿ ಧರಣಿ ಮುಂದುವರಿದ ಸಂದರ್ಭ, ಸ್ಥಳದಲ್ಲಿ ಆದಿವಾಸಿ ಮಹಿಳೆಯರೂ ಧರಣಿಯಲ್ಲಿ ನಿರತರಾಗಿದ್ದರು. ಹೀಗಿದ್ದೂ ಐಟಿಡಿಪಿ ಇಲಾಖಾ ಅಧಿಕಾರಿಗಳು ಕನಿಷ್ಠ ಮಾನವೀಯತೆಯ ದೃಷ್ಟಿಯಿಂದ ಆವರಣದಲ್ಲಿ ವಿದ್ಯುದ್ದೀಪವನ್ನು ಬೆಳಗುವ ಕಾಳಜಿ ತೋರಿಲ್ಲವೆಂದು ಆರೋಪಿಸಿದರು. ನಮ್ಮ ನೆರವಿಗೆ ಬಂದವರು ಪೊಲೀಸರು ಮತ್ತು ಸುತ್ತಮುತ್ತಲ ನಿವಾಸಿಗಳೆಂದು ಬೇಸರ ವ್ಯಕ್ತಪಡಿಸಿದರು.
ಕಾರ್ಯದರ್ಶಿ ಶೈಲೇಂದ್ರ ಕುಮಾರ್ ಮಾತನಾಡಿ ಲೈನ್‌ಮನೆಗಳಲ್ಲಿ ನೆಲೆಸಿರುವ ಆದಿವಾಸಿ ಕುಟುಂಬಗಳು ತೆರಳುವಂತೆ ಬೆದರಿಸಿರುವುದಾಗಿ ಬುಡಕಟ್ಟು ಕಾರ್ಮಿಕರ ಸಂಘದ ಪದಾಧಿಕಾರಿಗಳಾದ ಉಷಾ ಹಳ್ಳಿಗಟ್ಟು, ಲಲಿತಾ ಮೊದಲಾದವರು ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.


ಬುಧವಾರ ರಾತ್ರಿ ಐಟಿಡಿಸಿ ಕಛೇರಿ ಆವರಣದಲ್ಲಿ ಧರಣಿ ಮುಂದುವರಿದ ಸಂದರ್ಭ, ಸ್ಥಳದಲ್ಲಿ ಆದಿವಾಸಿ ಮಹಿಳೆಯರೂ ಧರಣಿಯಲ್ಲಿ ನಿರತರಾಗಿದ್ದರು. ಹೀಗಿದ್ದೂ ಐಟಿಡಿಪಿ ಇಲಾಖಾ ಅಧಿಕಾರಿಗಳು ಕನಿಷ್ಠ ಮಾನವೀಯತೆಯ ದೃಷ್ಟಿಯಿಂದ ಆವರಣದಲ್ಲಿ ವಿದ್ಯುದ್ದೀಪವನ್ನು ಬೆಳಗುವ ಕಾಳಜಿ ತೋರಿಲ್ಲವೆಂದು ಆರೋಪಿಸಿದರು. ನಮ್ಮ ನೆರವಿಗೆ ಬಂದವರು ಪೊಲೀಸರು ಮತ್ತು ಸುತ್ತಮುತ್ತಲ ನಿವಾಸಿಗಳೆಂದು ಬೇಸರ ವ್ಯಕ್ತಪಡಿಸಿದರು.
ಕಾರ್ಯದರ್ಶಿ ಶೈಲೇಂದ್ರ ಕುಮಾರ್ ಮಾತನಾಡಿ ಲೈನ್‌ಮನೆಗಳಲ್ಲಿ ನೆಲೆಸಿರುವ ಆದಿವಾಸಿ ಕುಟುಂಬಗಳು ಅತಂತ್ರ ಸ್ಥಿತಿಯನ್ನು ಎದುರಿಸುತ್ತಿದ್ದಾರೆ.


ಇಂತಹ ಕುಟುಂಬಗಳ ಅಭಿವೃದ್ಧಿ ಮತ್ತು ಪುನರ್ವಸತಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಅವಕಾಶವಿದೆ. ಹೀಗಿದ್ದೂ ಆದಿವಾಸಿಗಳ ಸ್ವತಂತ್ರ ಬದುಕಿಗೆ ಪೂರಕವಾದ ಕೆಲಸವನ್ನು ಇಲಾಖೆ ಮಾಡುತ್ತಿಲ್ಲವೆಂದು ಆರೋಪ ಮಾಡಿದರು. ನೊಂದ ಸಮುದಾಯದ ಹಿತಕ್ಕೆ ಪೂರಕವಾದ ಹೋರಾಟಗಳಿಗೆ ಎಲ್ಲ ಸಂಘ ಸಂಸ್ಥೆಗಳು ಕೈಜೋಡಿಸಬೇಕೆಂದು ಮನವಿ ಮಾಡಿದ ಶೈಲೇಂದ್ರ ಕುಮಾರ್, ಜಿಲ್ಲೆಯ ಶಾಸಕರುಗಳು, ಸಂಸದರು, ಜಿಲ್ಲಾ ಉಸ್ತುವಾರಿ ಸಚಿವರು ತಕ್ಷಣ ಮಧ್ಯಪ್ರವೇಶಿಸಿ ಆದಿವಾಸಿಗಳಿಗೆ ನ್ಯಾಯ ಒದಗಿಸಬೇಕೆಂದು ಮನವಿ ಮಾಡಿದರು.


2016ರಲ್ಲಿ ಜಿಲ್ಲಾಡಳಿತವು ಕುಂದ ಗ್ರಾಮದಲ್ಲಿ 6 ಎಕರೆ ಭೂಮಿಯಲ್ಲಿ ನಿವೇಶನಗಳಿಗೆ ಹಕ್ಕು ಪತ್ರ ನೀಡಿ, ತಾಲ್ಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಅವರಿಗೆ ಪತ್ರದ ಮೂಲಕ ಪುನರ್ವಸತಿ ಮಾಡುವ ಜವಾಬ್ದಾರಿಯನ್ನು ನೀಡಿದ್ದರೂ ವೀರಾಜಪೇಟೆ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಹಾತೂರು ಪಂಚಾಯ್ತಿ ಪಿಡಿಓ, ಐಟಿಡಿಪಿ ಅಧಿಕಾರಿಗಳು ಏನನ್ನೂ ಮಾಡಿಲ್ಲ. ಅಲ್ಲದೆ, ಮೂಲಭೂತ ಸಮಸ್ಯೆಗಳಾದ ರಸ್ತೆ, ಕುಡಿಯುವ ನೀರು, ಭೂಮಿ ಸಮತಟ್ಟು, ಗಡಿ ಗುರುತಿಸುವುದು ಮತ್ತು ಹೊಸ ಮನೆಗಳಿಗೆ ಆದೇಶ ಮಾಡಿಲ್ಲವೆಂದು ಪ್ರತಿಭಟನಾಕಾರರು ಆರೋಪಿಸಿದರು.
ತೋಟದ ಲೈನ್ ಮನೆಗಳಲ್ಲಿ ವಾಸಿಸುತ್ತಿರುವ ಬುಡಕಟ್ಟು ಸಮುದಾಯದವರಿಗೆ ಆಯಾ ಪಂಚಾಯ್ತಿ ಮುಖಂಡರೊಂದಿಗೆ ಸಮಾಲೋಚನೆ ನಡೆಸಿದರು.


ಈಗಾಗಲೆ ನಿವೇಶನ ರಹಿತ ಆದಿವಾಸಿ ಕುಟುಂಬಗಳಿಗೆ ನಿವೇಶನ ನೀಡಲು ಜಿಲ್ಲಾಡಳಿತ ಕ್ರಮ ಕೈಗೊಂಡಿದ್ದು, ಕುಟುಂಬಗಳ ಸಮೀಕ್ಷೆ ನಡೆಯುತ್ತಿದೆ. ಗ್ರಾಮ ಪಂಚಾಯ್ತಿಗಳಿಗೂ ಸರ್ವೇ ನಡೆಸಲು ಸೂಚನೆ ನೀಡಲಾಗಿದ್ದು, ಈ ಪ್ರಕ್ರಿಯೆಗೆ ಒಂದಷ್ಟು ಕಾಲಾವಕಾಶ ಬೇಕಾಗುತ್ತದೆ. ಮುಂದಿನ ಎರಡು ತಿಂಗಳ ಒಳಗೆ ನಿಮ್ಮ ಬೇಡಿಕೆಗಳನ್ನು ಈಡೇರಿಸುವುದಾಗಿ ಜಿಲ್ಲಾಧಿಕಾರಿ ಭರವಸೆ ನೀಡಿದರು. ಜಿಲ್ಲಾಧಿಕಾರಿಗಳ ಭರವಸೆ ಹಿನ್ನೆಲೆಯಲ್ಲಿ ಧರಣಿ ಸತ್ಯಾಗ್ರಹದಿಂದ ತಾತ್ಕಾಲಿಕವಾಗಿ ಹಿಂದೆ ಸರಿದ ಪ್ರತಿಭಟನಾಕಾರರು ಭರವಸೆ ಈಡೇರದಿದ್ದಲ್ಲಿ ಹೋರಾಟವನ್ನು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು.

Leave a Reply

Your email address will not be published. Required fields are marked *

error: Content is protected !!