ತುಳು ಶಿವಳ್ಳಿ ಬ್ರಾಹ್ಮಣ ಸಮಾಜಕ್ಕೆ ಮಂತ್ರಿ ಸ್ಥಾನ ಅಗತ್ಯವಿದೆ:ಪಲಿಮಾರು ಶ್ರೀ
ಉಡುಪಿ: ತುಳು ಶಿವಳ್ಳಿ ಬ್ರಾಹ್ಮಣ ಸಮಾಜಕ್ಕೆ ಮಂತ್ರಿ ಸ್ಥಾನ ಅಗತ್ಯವಿದ್ದು, ಇದಕ್ಕೆ ಗಟ್ಟಿಯಾದ ಧ್ವನಿಯ ಅವಶ್ಯಕತೆ ಇದೆ ಎಂದು ಪರ್ಯಾಯ ಪಲಿಮಾರು ಮಠದ ವಿದ್ಯಾಧೀಶ ಸ್ವಾಮೀಜಿ ಹೇಳಿದರು.
ಉಡುಪಿ ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ಭಾನುವಾರ ನಡೆದ ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವ ಸಮ್ಮೇಳನದ ಸಮಾರೋಪದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಶಿವಳ್ಳಿ ಸಮಾಜದವರು ತಮ್ಮ ಮಕ್ಕಳನ್ನು ಐಎಎಸ್, ಐಪಿಎಸ್ ಹಾಗೂ ಕೆಎಎಸ್ ಪರೀಕ್ಷೆಗಳಿಗೆ ಅಣಿಗೊಳಿ
ಸಬೇಕು. ವೈದ್ಯ, ಎಂಜಿನಿಯರಿಂಗ್ ಕಲಿಸು
ವಂತೆ ಒಂದು ಮಗುವನ್ನು ಐಪಿಎಸ್, ಐಎಎಸ್ ಅಧಿಕಾರಿಯನ್ನಾಗಿ ಮಾಡ
ಬೇಕು. ಇದು ಸಮಾಜದ ಬೆಳವಣಿಗೆ ದೃಷ್ಟಿಯಿಂದ ಬಹಳ ಮುಖ್ಯ ಎಂದರು
ಉಡುಪಿ ಶಾಸಕ ಕೆ. ರಘುಪತಿ ಭಟ್ ಮಾತನಾಡಿ, ‘ಬ್ರಾಹ್ಮಣರು ಬುದ್ಧಿವಂತಿಕೆಯಲ್ಲಿ ಮುಂಚೂಣಿಯಲ್ಲಿ ಇದ್ದಾರೆ. ಆದರೆ ನಾಗರಿಕ ಸೇವಾ ಹುದ್ದೆಗಳನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಆಡಳಿತಾತ್ಮಕ ಹಾಗೂ ರಾಜಕೀಯವಾಗಿ ನಾವು ಚಿಂತನೆ ಮಾಡುತ್ತಿಲ್ಲ’ ಎಂದು ವಿಷಾದಿಸಿದರು.
‘ತುಳು ಶಿವಳ್ಳಿ ಬ್ರಾಹ್ಮಣ ಸಮಾಜ ಕೂಡ ಇನ್ನಷ್ಟು ಬಲವರ್ಧನೆ ಆಗ
ಬೇಕು. ಸಂಘಟನೆ ಇದ್ದಲ್ಲಿ ಮಾತ್ರ ಸರ್ಕಾರ, ಜನಪ್ರತಿನಿಧಿಗಳು ಹಾಗೂ ಅಧಿ
ಕಾರಿಗಳು ತಲೆ ಬಾಗುತ್ತಾರೆ’ ಎಂದರು.
ಪಲಿಮಾರು ಕಿರಿಯ ವಿದ್ಯಾರಾಜೇಶ್ವರ ಸ್ವಾಮೀಜಿ, ಡಾ. ಕೆ.ಪಿ. ಪುತ್ತೂರಾಯ, ಎಂ.ಬಿ. ಪುರಾಣಿಕ್, ಮಂಜುನಾಥ ಉಪಾಧ್ಯಾಯ ಇದ್ದರು.