ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ (ಉತ್ತರ)ನೂತನ ಪದಾಧಿಕಾರಿಗಳ ಪದಗ್ರಹಣ

ಉಡುಪಿ ಜು.25 (ಉಡುಪಿ ಟೈಮ್ಸ್ ವರದಿ): ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ (ಉತ್ತರ), ಕಾಪು ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ (ಉತ್ತರ) ಹಾಗೂ ಕಾಪು ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ (ಉತ್ತರ) ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಹಿರಿಯಡ್ಕದ ಕೋಟ್ನಕಟ್ಟೆಯ ಸುರಭಿ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯಿತು. 

ಸಮಾರಂಭದಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ಮತ್ತು ಪ್ರಚಾರ ಸಮಿತಿ ಮತ್ತು ಯುವ ಕಾಂಗ್ರೆಸ್ ಸಮಿತಿಯ ಎಲ್ಲಾ ಪದಾಧಿಕರಿಗಳಿಗೆ ಪದಗ್ರಹಣ ಮಾಡಲಾಯಿತು. ಈ ವೇಳೆ ಮೂರು ಸಮಿತಿಯ ಪದಾಧಿಕಾರಿಗಳಿಗೆ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಸಂವಿಧಾನದ ಪೀಟಿಕೆಯನ್ನು ಓದಿಸಲಾಯಿತು. ನಂತರ ಎಲ್ಲಾ ನೂತನ ಪದಾಧಿಕಾರಿಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಕೆಪಿಸಿಸಿಯ ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅವರನ್ನು ಸನ್ಮಾನಿಸಲಾಯಿತು.

ಹಾಗೂ ಇತ್ತೀಚೆಗೆ ನಿಧನರಾದ ಕಾಂಗ್ರೆಸ್ ನ ಕಾರ್ಯಕರ್ತ ಉಮೇಶ್ ಕುಲಾಲ್ ಬೈರಂಪಲ್ಲಿ ಅವರಿಗೆ ಮೌನ ಪ್ರಾರ್ಥನೆ ನೆರವೇರಿಸುವ ಮೂಲಕ ಶ್ರದ್ಧಾಂಜಲಿ ಅರ್ಪಿಸಲಾಯಿತು.

ಲಕ್ಷ್ಮೀ ನಾರಾಯಣ ಪ್ರಭು ಕಾರ್ಯಕ್ರಮವನ್ನು ನಿರೂಪಿಸಿದರು. ಕಾಪು (ಉತ್ತರ) ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸಂತೋಷ್ ಕುಲಾಲ್ ಸ್ವಾಗತಿಸಿದರು. ಕುಕ್ಕೆ ಹಳ್ಳಿ ಪಂಚಾಯತ್ ಸದಸ್ಯ ಕಿರಣ್ ಹೆಗ್ಡೆ ವಂದಿಸಿದರು. 

ಈ ಸಂದರ್ಭ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಮತ್ತು ಜಿಲ್ಲಾ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿಯ ಅಧ್ಯಕ್ಷರಾದ ದಿನೇಶ್ ಪುತ್ರನ್ ಮತ್ತು ಕಾಂಗ್ರೆಸ್ ಹಿರಿಯ ಮುಖಂಡರಾದ ನಾಗೇಶ ಉದ್ಯಾವರ, ಜಿಲ್ಲಾ ಕಾಂಗ್ರೆಸ್ ಉಸ್ತುವಾರಿಯಾದ ನೀರೆ ಕೃಷ್ಣಶೆಟ್ಟಿ ಮತ್ತು ದೀಪಕ್ ಕೋಟ್ಯಾನ್ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಕಾಪು (ಉತ್ತರ) ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸಂತೋಷ್ ಕುಲಾಲ್ ಮತ್ತು ಕಾಪು ಬ್ಲಾಕ್ (ಉತ್ತರ) ಪ್ರಚಾರ ಸಮಿತಿ ಅಧ್ಯಕ್ಷರಾದ ಚರಣ್ ವಿಠಲ್ ಕುಧಿ ಮತ್ತು ಕಾಪು ಯೂತ್ ಕಾಂಗ್ರೆಸ್ (ಉತ್ತರ) ಅಧ್ಯಕ್ಷರಾದ ನವೀನ್ ಸಾಲಿಯಾನ್ ಹಾಗೂ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಸಂಧ್ಯಾಶೆಟ್ಟಿ, ಕಿಸಾನ್ ಸೆಲ್ ಅಧ್ಯಕ್ಷರಾದ ಸಂದರ್ ಪೂಜಾರಿ ಹಾಗೂ ಎಸ್ ಟಿ ಸೆಲ್ ನಅಧ್ಯಕ್ಷರಾದ ಜೈರಾಮ್ ನಾಯ್ಕ್ ಮತ್ತು ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಅಧ್ಯಕ್ಷರು ರೋಷನ್ ಶೆಟ್ಟಿ , ಕಾಪು ಬ್ಲಾಕ್ ಸಾಮಾಜಿಕ ಜಾಲಾತಾಣ ಅಧ್ಯಕ್ಷ ನಿತೀನ್ ಶೆಟ್ಟಿ, ಮಾಜಿ ಮಂಡಲ ಪ್ರಧಾನರಾದ ಶಾಂತಾರಾಂ ಸೂಡಾ ಪೆರ್ಡೂರು, ಕಾಂಗ್ರೆಸ್ ಮುಖಂಡರಾದ ನಾಗೇಶ್ ಉದ್ಯಾವರ, ಕಾಪು ಬ್ಲಾಕ್ ಸೇವಾ ದಳದ ಅಧ್ಯಕ್ಷ ಶರತ್ ನಾಯ್ಕ್, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!