ಪಿಕಪ್ ವಾಹನ ಚಲಾಯಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ
ಪಿಕಪ್ ವಾಹನ ಚಾಲನೆ ಮಾಡಿಕೊಂಡು ಬರುತ್ತಿದ್ದ ಸಂದರ್ಭ ಚಾಲಕನಿಗೆ ಎದೆ ನೋವು ಕಾಣಿಸಿಕೊಂಡು, ಸಹ ಚಾಲಕ ಅವರನ್ನು ಆಸ್ಪತ್ರೆಗೆ ಕರೆ ತರುವ ವೇಳೆ ದಾರಿ ಮಧ್ಯೆ ಮೃತಪಟ್ಟ ಘಟನೆ ಸುಳ್ಯ ಪೈಚಾರುನಲ್ಲಿ ಗುರುವಾರ ರಾತ್ರಿ ಸಂಭವಿಸಿದೆ.
ಗದಗ ತಾಲೂಕು ಹೊಸೂರು ಗ್ರಾಮದ ಹುಸೇನಸಾಬ ಹೆಬಸುರ (45) ಮೃತರು. ಬೆಳ್ತಂಗಡಿಯಲ್ಲಿ ಶಾಮಿಯಾನ ಅಂಗಡಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಅವರು ಮಡಿಕೇರಿಯಲ್ಲಿ ಕಾರ್ಯಕ್ರಮವೊಂದಕ್ಕೆ ಅಳವಡಿಸಲಾಗಿದ್ದ ಶಾಮಿಯಾನವನ್ನು ತರಲೆಂದು ಮಡಿಕೇರಿಗೆ ಗುರುವಾರ ರಾತ್ರಿ ಹೊರಟ್ಟಿದ್ದರು. ವಾಹನ ಸುಳ್ಯದ ಪೈಚಾರು ಸಮೀಪ ಬರುತ್ತಿದ್ದಂತೆ ಚಾಲಕನಿಗೆ ಎದೆ ನೋವು ಕಾಣಿಸಿಕೊಂಡಿದ್ದು ಅಲ್ಲೇ ಬದಿಯಲ್ಲಿ ವಾಹನವನ್ನು ನಿಲ್ಲಿಸಿ ಬಳಿಯಲ್ಲಿ ಕುಳಿತಿದ್ದ ವ್ಯಕ್ತಿಗೆ ವಿಷಯ ತಿಳಿಸಿದ್ದಾರೆ.