ಉಡುಪಿ: ನ.14ರಿಂದ 20ರ ವರೆಗೆ ಅಖಿಲ ಭಾರತ ಸಹಕಾರ ಸಪ್ತಾಹ

ಉಡುಪಿ: ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್‌ ನೇತೃತ್ವದಲ್ಲಿ ಜಿಲ್ಲೆಯ ವಿವಿಧ ಸಹಕಾರ ಸಂಸ್ಥೆಗಳ ಸಹಯೋಗದೊಂದಿಗೆ ನ. 14ರಿಂದ 20ರ ವರೆಗೆ ಜಿಲ್ಲೆಯಾದ್ಯಂತ ‘ನವ ಭಾರತದಲ್ಲಿ ಸಹಕಾರ ಸಂಸ್ಥೆಗಳ ಪಾತ್ರ’ ಎಂಬ ಧ್ಯೇಯ ವಾಕ್ಯದೊಂದಿಗೆ 66ನೇ ಅಖಿಲ ಭಾರತ ಸಹಕಾರ ಸಪ್ತಾಹ ನಡೆಯಲಿದೆ ಎಂದು ಜಿಲ್ಲಾ ಸಹಕಾರಿ ಯೂನಿಯನ್‌ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು.


ನಗರದ ಡಯಾನ ಹೋಟೆಲ್‌ನಲ್ಲಿ ಬುಧವಾರ ಕರೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಸಹಕಾರ ಸಚಿವ ಬಸವರಾಜ ಬೊಮ್ಮಾಯಿ ನ. 14ರಂದು ಮಧ್ಯಾಹ್ನ 3 ಗಂಟೆಗೆ ಕಾಪು ಜನಾರ್ದನ ದೇವಸ್ಥಾನದ ಸಭಾಂಗಣದಲ್ಲಿ ಸಪ್ತಾಹಕ್ಕೆ ಚಾಲನೆ ನೀಡುವರು. ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಧ್ವಜಾರೋಹಣ ನೆರವೇರಿಸುವರು. ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಅಧಕ್ಷ ಡಾ. ಎಂ.ಎನ್‌. ರಾಜೇಂದ್ರ ಕುಮಾರ್‌ ಅಧ್ಯಕ್ಷತೆ ವಹಿಸುವರು ಎಂದರು.


ನ. 15ರಂದು ಬಿದ್ಕಲ್‌ಕಟ್ಟೆ ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘ ವಠಾರದಲ್ಲಿ
ಬೆಳಿಗ್ಗೆ 10ಗಂಟೆಗೆ  ಸಪ್ತಾಹದ ಎರಡನೇ ದಿನದ ಕಾರ್ಯಕ್ರಮ, 16ರಂದು ಮಧ್ಯಾಹ್ನ
3.30ಕ್ಕೆ ಮಂದಾರ್ತಿ ದುರ್ಗಾಪರಮೇಶ್ವರಿ ಕಲ್ಯಾಣ ಮಂದಿರದಲ್ಲಿ 3ನೇ ದಿನದ ಕಾರ್ಯಕ್ರಮ ಹಾಗೂ 17ಕ್ಕೆ ಮುನಿಯಾಲು ಮಾತಿಬೆಟ್ಟು ಬ್ರಹ್ಮಶ್ರೀ ನಾರಾಯಣ ಗುರುಸಭಾಭವನ ಮಧ್ಯಾಹ್ನ 3ಗಂಟೆಗೆ 4ನೇ ದಿನದ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ತಿಳಿಸಿದರು.


ನ. 19ರಂದು ಅಜ್ಜರಕಾಡಿನ ಪುರಭವನದಲ್ಲಿ ಮಧ್ಯಾಹ್ನ 3ಗಂಟೆಗೆ ಸಪ್ತಾಹದ 5ನೇ ದಿನದ
ಕಾರ್ಯಕ್ರಮ ಹಾಗೂ 20ರಂದು ಖಂಬದಕೋಣೆ ಕರ್ನಾಟಕ ಖಾರ್ವಿ ಹರಿಕಾಂತ ಸಭಾಂಗಣದಲ್ಲಿ ಬೆಳಿಗ್ಗೆ 10ಗಂಟೆಗೆ ಸಪ್ತಾಹದ ಸಮಾರೋಪ ಸಮಾರಂಭ ನಡೆಯಲಿದೆ ಎಂದು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಸಹಕಾರ ಸಂಘಗಳ ಉಪನಿಬಂಧಕಿ ಚಂದ್ರಪ್ರತಿಮಾ, ಸಹಕಾರಿಗಳಾದ ಡಾ. ದೇವಿ ಪ್ರಸಾದ್‌ ಶೆಟ್ಟಿ, ಅಶೋಕ್‌ ಕುಮಾರ್‌ ಬಲ್ಲಾಳ್‌, ಯಶ್‌ಪಾಲ್‌ ಸುವರ್ಣ, ಮಹೇಶ್‌ ಹೆಗ್ಡೆ, ಅಶೋಕ್‌ ಕುಮಾರ್‌ ಶೆಟ್ಟಿ, ಕಟಪಾಡಿ ಶಂಕರ ಪೂಜಾರಿ, ಪಿ.ಎಸ್‌. ಶ್ರೀಧರ, ಎಚ್‌. ಗಂಗಾಧರ ಶೆಟ್ಟಿ, ಎನ್‌. ಮಂಜಯ್ಯ ಶೆಟ್ಟಿ, ಕೃಷ್ಣ ಮೂರ್ತಿ, ಅನಿಲ್‌ ಎಸ್‌. ಪೂಜಾರಿ, ಹರೀಶ್‌ ಶೆಟ್ಟಿ, ಹರೀಶ್‌ ಕಿಣಿ ಮೊದಲಾದವರು ಇದ್ದರು.

ರಾಜ್ಯಮಟ್ಟದ ಸಹಕಾರ ಸಪ್ತಾಹ
ಉಡುಪಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದ ಆವರಣದಲ್ಲಿ ಇದೇ 18ರಂದು ಬೆಳಿಗ್ಗೆ
10ಗಂಟೆಗೆ ರಾಜ್ಯಮಟ್ಟದ ಸಹಕಾರ ಸಪ್ತಾಹ ನಡೆಯಲಿದ್ದು, ಸಹಕಾರ ಸಚಿವ ಬಸವರಾಜ
ಬೊಮ್ಮಾಯಿ ಉದ್ಘಾಟಿಸುವರು. ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಹಕಾರಿ ಧ್ವಜಾರೋಹಣ ನೆರವೇರಿಸುವರು. ಸಂಸದೆ ಶೋಭಾ ಕರಂದ್ಲಾಜೆ ಉತ್ತಮ ಸಹಕಾರ ಸಂಘಗಳಿಗೆ ಪ್ರಶಸ್ತಿ ಪ್ರದಾನ ಮಾಡುವರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ ಎನ್‌. ಗಂಗಣ್ಣ ಸಹಕಾರ ವಾರ ಪತ್ರಿಕೆ ವಿಶೇಷ ಸಂಚಿಕೆ ಬಿಡುಗಡೆ ಮಾಡುವರು. ಶಾಸಕ ಕೆ. ರಘುಪತಿ ಭಟ್‌ ಅಧ್ಯಕ್ಷತೆ ವಹಿಸುವರು.

Leave a Reply

Your email address will not be published. Required fields are marked *

error: Content is protected !!