ಉಡುಪಿ : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಗೆ ಸನ್ಮಾನ : ಹಾಲಾಡಿ, ಸುಕುಮಾರ್ ಶೆಟ್ಟಿ ಗೈರು

ಉಡುಪಿ : ಸಂಸದ ನಳಿನ್ ಕುಮಾರ್ ಕಟೀಲ್ ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಮೊದಲ ಬಾರಿ ಉಡುಪಿಗೆ ಭೇಟಿ ಕೊಟ್ಟಿದ್ದು, ಜಿಲ್ಲಾ ಬಿಜೆಪಿಯ ಸನ್ಮಾನ ಕಾರ್ಯಕ್ರಮದಲ್ಲಿ ರಾಜ್ಯಾಧ್ಯಕ್ಷರ ಉಪಸ್ಥಿತಿಯಲ್ಲಿ ಉಡುಪಿ ಜಿಲ್ಲಾ ಬಿಜೆಪಿಯ ಅಸಮಾಧಾನ ಸ್ಫೋಟಗೊಂಡಿದ್ದು, ಪ್ರಮುಖ ಮೂರು ನಾಯಕರು ಗೈರು ಹಾಜರಾಗಿದ್ದಾರೆ.

ಉಡುಪಿಯ ಕಿದಿಯೂರು ಸಭಾಂಗಣದಲ್ಲಿ ನೂತನ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಅಭಿನಂದನಾ ಸಮಾರಂಭ ಆಯೋಜಿಸಿದ್ದು, ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಬೈಂದೂರು ಶಾಸಕ ಸುಕುಮಾರ ಶೆಟ್ಟಿ ಗೈರು ಹಾಜರಾಗಿದ್ದು ಉಡುಪಿ ಜಿಲ್ಲಾ ಬಿಜೆಪಿಯಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಎದ್ದು ಕಾಣುತ್ತಿತ್ತು.

ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟದಲ್ಲಿ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರಿಗೆ ಸಚಿವ ಸ್ಥಾನ ಸಿಗದೇ ಇದ್ದುದ್ದಕ್ಕೆ, ಜಿಲ್ಲಾ ಮತ್ತು ರಾಜ್ಯ ನಾಯಕರ ಮೇಲೆ ಹಾಲಾಡಿ ಮುನಿಸಿಕೊಂಡಿರುವುದು ಸ್ಪಷ್ಟವಾಗಿದೆ.

ಅದರಲ್ಲೂ ಪ್ರಸ್ತುತ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಮತ್ತು ಮಾಜಿ ಅಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ ನಡುವಿನ ಆಸನ ಹಾಲಾಡಿಯವರಿಗೆ ಮೀಸಲಿರಿಸಲಾಗಿದ್ದು, ಮಾತ್ರವಲ್ಲದೆ ಆ ಆಸನದಲ್ಲಿ ಹಾಲಾಡಿ ಅವರ ಹೆಸರನ್ನು ಕೂಡ ಮುದ್ರಿಸಲಾಗಿತ್ತು. ಆದರೆ ಸಭಾ ಕಾರ್ಯಕ್ರಮದ ವೇಳೆ ಹಾಲಾಡಿ ಅವರ ಅನುಪಸ್ಥಿತಿ ಎದ್ದು ಕಾಣುತ್ತಿತ್ತು

Leave a Reply

Your email address will not be published. Required fields are marked *

error: Content is protected !!