ಉಡುಪಿ: ಚೀನಾದಿಂದ ಮರಳಿದ್ದ ಮೂವರಲ್ಲಿ ಕೊರೊನಾ ಸೋಂಕು ಪತ್ತೆಯಾಗಿಲ್ಲ
ಉಡುಪಿ: ಜಿಲ್ಲಾ ಆಸ್ಪತ್ರೆಯಲ್ಲಿ ಶಂಕಿತ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ ಮೂವರು ರೋಗಿಗಳ ವೈದ್ಯಕೀಯ ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಬಂದಿದ್ದು, ಕೊರೊನಾ ಸೋಂಕು ಪತ್ತೆಯಾಗಿಲ್ಲ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.
15 ದಿನಗಳ ಹಿಂದೆ ಚೀನಾದಿಂದ ಉಡುಪಿಗೆ ಮರಳಿದ್ದ ಒಂದೇ ಕುಟುಂಬದ ಮೂವರಿಗೆ ,ಕಾಪುವಿನ ಯುವಕನಿಗೆ ಜ್ವರ, ಶೀತ, ಹಾಗೂ ಗಂಟಲು ಸೋಂಕು ಕಾಣಿಸಿಕೊಂಡಿತ್ತು. ಜಿಲ್ಲಾ ಆಸ್ಪತ್ರೆಯ ವಿಶೇಷ ವಾರ್ಡ್‌ನಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.
ಶನಿವಾರ ರೋಗಿಗಳ ರಕ್ತದ ಮಾದರಿಯನ್ನು ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು.ಇದರಲ್ಲಿ ಸೋಂಕು ಪತ್ತೆಯಾಗಿಲ್ಲ ಎಂಬ ವರದಿ ಬಂದಿದೆ. ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ