ಬುಧವಾರ ‘ಭಾರತ್ ಬಂದ್’ ಗೆ ಉಡುಪಿ ಸಿಪಿಐಎಂ ಬೆಂಬಲ

ಉಡುಪಿ : ಜನವರಿ 8ರಂದು 10 ಕೇಂದ್ರ ಕಾರ್ಮಿಕ ಸಂಘಟನೆಗಳು ಮತ್ತು 50 ಕ್ಕೂ ಹೆಚ್ಚು ಸ್ವತಂತ್ರ ನೌಕರ ಸಂಘಟನೆಗಳು ನೀಡಿರುವ ಅಖಿಲ ಭಾರತ ಮುಷ್ಕರಕ್ಕೆ ಸಿಪಿಐಎಂ ಉಡುಪಿ ಜಿಲ್ಲಾ ಸಮಿತಿ ಸಂಪೂರ್ಣ ಬೆಂಬಲ ವ್ಯಕ್ತ ಪಡಿಸಿದೆ.
ಈ ಮುಷ್ಕರ ದೇಶಪ್ರೇಮಿ ನಡೆಯಾಗಿದ್ದು ಸಾರ್ವಜನಿಕ ಉದ್ದಿಮೆಗಳನ್ನು ರಕ್ಷಿಸುವ ಕರೆ ನೀಡಿದೆ. ಸಾಕಷ್ಟು ಆದಾಯವಿಲ್ಲದ ರೈತರು ಆತ್ಮಹತ್ಯೆಗೆ ಶರಣಾಗುತ್ತಿರುವ ಸಂದರ್ಭದಲ್ಲಿ ಸ್ವಾಮಿನಾಥನ್ ಆಯೋಗದ ಶಿಫಾರಸು ಜಾರಿ ಮಾಡಬೇಕೆಂದು ಒತ್ತಾಯಿಸಿದೆ. ಬಿಜೆಪಿ ಸರಕಾರವು ಸ್ವಾಮಿನಾಥನ್ ಆಯೋಗದ ಶಿಫಾರಸ್ಸು ಜಾರಿ ಮಾಡುವುದಾಗಿ ಭರವಸೆ ನೀಡಿದ್ದರು ಅದನ್ನು ಜಾರಿ ಮಾಡಿಲ್ಲ.

 ದೇಶದ ಎಲ್ಲಾ ನಾಗರಿಕರಿಗೂ ಪೆನ್ಷನ್ ನೀಡಬೇಕೆಂದು ಕಾರ್ಮಿಕ ಸಂಘಟನೆಗಳು ಒತ್ತಾಯಿಸಿದ್ದು, ಕನಿಷ್ಟ ವೇತನ ಹೆಚ್ಚಳ ಮಾಡಬೇಕೆಂದು ಒತ್ತಾಯಿಸಿವೆ. ಆಗ ಜನರ ಆದಾಯ ಹೆಚ್ಚುವುದರಿಂದ ವ್ಯಾಪಾರ, ವಹಿವಾಟು ಹೆಚ್ಚುತ್ತದೆ.ರಾಷ್ಟ್ರೀಯ ಹೆದ್ದಾರಿ, ಮರಳು, ನಿವೇಶನ ಮೊದಲಾದ ಸಮಸ್ಯೆಗಳನ್ನು ಬಗೆಹರಿಸಬೇಕೆಂದು ಕಾರ್ಮಿಕ ಸಂಘಟನೆಗಳು ಬೇಡಿಕೆ ಇಟ್ಟಿದ್ದು ಸಮಯೋಚಿತವಾಗಿ ದೆ. ಆದ್ದರಿಂದ ಎಲ್ಲಾ ಕಾರ್ಮಿಕರು ಈ ಮುಷ್ಕರವನ್ನು ಯಶಸ್ವಿಗೊಳಿಸಬೇಕು ಹಾಗೇ ಜನರು ಬೆಂಬಲ ನೀಡಬೇಕೆಂದು ಸಿಪಿಐಎಂ ಉಡುಪಿ ಜಿಲ್ಲಾ ಸಮಿತಿ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!