ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಮಟ್ಟಾರ್ ರತ್ನಾಕರ ಹೆಗ್ಡೆ ನೇತೃತ್ವದ ನಿಯೋಗ ಮುಖ್ಯಮಂತ್ರಿ ಭೇಟಿ

ಉಡುಪಿ :  ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಮಟ್ಟಾರ್ ರತ್ನಾಕರ ಹೆಗ್ಡೆಯವರ ನೇತೃತ್ವದಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ,ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಕೆ. ರಘುಪತಿ ಭಟ್ ಉಡುಪಿ , ವಿ. ಸುನಿಲ್ ಕುಮಾರ್ ಕಾರ್ಕಳ , ಲಾಲಾಜಿ ಆರ್ ಮೆಂಡನ್ ಕಾಪು, ಬಿ. ಎಂ. ಸುಕುಮಾರ್ ಶೆಟ್ಟಿ ಬೈಂದೂರು,
ಜಿಲ್ಲಾ ಪದಾಧಿಕಾರಿಗಳಾದ ಕುಯಿಲಾಡಿ ಸುರೇಶ್ ನಾಯಕ್, ಬಿ. ರವಿ ಅಮೀನ್, ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು ಮೊದಲಾದವರ ನಿಯೋಗ ಮಾನ್ಯ ಮುಖ್ಯಮಂತ್ರಿಯವರನ್ನು ಅವರ ನಿವಾಸ ದವಳಗಿರಿಯಲ್ಲಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು. ಇವರೊಂದಿಗೆ ಯಲಹಂಕ ಶಾಸಕ ವಿಶ್ವನಾಥ್ ಮತ್ತು ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷರಾದ ಭಾರತೀ ಶೆಟ್ಟಿ ಉಪಸ್ಥಿತರಿದ್ದರು.
ಉಡುಪಿ ಜಿಲ್ಲೆಯ ಜ್ವಲಂತ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಯಿತು. ಜಿಲ್ಲೆಗೆ ಬೇಕಾದ ಅನುದಾನ ನೀಡುವುದಾಗಿ ಆಶ್ವಾಸನೆ ನೀಡಿದ ಮಾನ್ಯ ಮುಖ್ಯಮಂತ್ರಿಗಳು ಮಳೆಗಾಲ ಕಳೆದ ನಂತರ ಉಡುಪಿ ಜಿಲ್ಲೆಗೆ ಭೇಟಿ ನೀಡುವುದಾಗಿ ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!