ಉಡುಪಿ: ಜಿಲ್ಲಾ ಜೆಡಿಎಸ್ ವಕ್ತಾರ ಆರ್ಥಿಕ ಅಡಚಣೆಗೆ ನೊಂದು ಆತ್ಮಹತ್ಯೆ
ಉಡುಪಿ: ಜಿಲ್ಲಾ ಜೆಡಿಎಸ್ ವಕ್ತಾರ ಆರ್ಥಿಕ ಆಡಚಣೆಗೆ ನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊರಂಗ್ರಪಾಡಿ ಬೈಲೂರಿನಲ್ಲಿ ನಡೆದಿದೆ.
ಜಿಲ್ಲಾ ಜಾತ್ಯತೀತ ಜನತಾ ದಳದ ವಕ್ತಾರ, ಭಿರ್ತಿ ಕೋ. ಅಪರೇಟಿವ್ ಸೊಸೈಟಿಯ ಕಾರ್ಯನಿರ್ವಾಹಣಾಧಿಕಾರಿ ಪ್ರದೀಪ್ ಜಿ. ಬೈಲೂರು (37) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.
ನಿನ್ನೆ ರಾತ್ರಿ ತನ್ನ ತಂದೆ ತಾಯಿ ಚಿಕ್ಕಮಗಳೂರು ಮನೆಗೆ ಹೋಗಿದ್ದ ಸಂದರ್ಭ ಕೊರಂಗ್ರಪಾಡಿಯ ಗೇಟ್ ಜಂಕ್ಷನ್ ಬಳಿಯ ತನ್ನ ಬಾಡಿಗೆ ಮನೆಯಲ್ಲಿ ಇದ್ದ ಪ್ರದೀಪ್ ಫ್ಯಾನಿನ ಹುಕ್ಕಿಗೆ ನೈಲಾನ್ ಹಗ್ಗದಿಂದ ಕುತ್ತಿಗೆಗೆ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಉಡುಪಿ ಪೊಲೀಸರು ತಿಳಿಸಿದ್ದಾರೆ.
ಆತ್ಮಹತ್ಯೆಗೆ ಆರ್ಥಿಕ ಅಡಚಣೆ ಕಾರಣವೆಂದು ಪೊಲೀಸರು ತಿಳಿಸಿದ್ದು ಮುಂದಿನ ತನಿಖೆ ನಡೆಸುತ್ತಿದ್ದಾರೆ. ವಿವಾಹಿತನಾಗಿದ್ದ ಆಗಿದ್ದ ಈತ ಕೆಲವು ಸಮಯಗಳ ಹಿಂದೆ ಪತ್ನಿಗೆ ವಿಚ್ಛೇದನ ನೀಡಿದ್ದರೆಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.