ಉಡುಪಿ: ಡಾ. ಮುದ್ದುಮೋಹನ್ ಅವರಿಂದ ಹಿಂದೂಸ್ತಾನಿ ಸಂಗೀತ ಕಾರ್ಯಕ್ರಮ

ಉಡುಪಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ , ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಪರ್ಯಾಯ ಶ್ರೀ ಫಲಿಮಾರು ಮಠ, ಶ್ರೀ ಕೃಷ್ಣ ಮಠ ಉಡುಪಿ ಇವರ ಸಹಯೋಗದಲ್ಲಿ, ಆಗಸ್ಟ್ 22 ರಂದು ರಾತ್ರಿ 7 ಗಂಟೆಗೆ , ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ,  ನಿವೃತ್ತ ಐ.ಎ.ಎಸ್ ಅಧಿಕಾರಿ ಡಾ. ಮುದ್ದುಮೋಹನ್ ಅವರಿಂದ ಹಿಂದೂಸ್ತಾನಿ ಸಂಗೀತ ಕಾರ್ಯಕ್ರಮ ನಡೆಯಲಿದೆ.

ಡಾ. ಮುದ್ದುಮೋಹನ್ ಅವರು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ನಿರ್ದೇಶಕರಾಗಿ, ವಾರ್ತಾ ಇಲಾಖೆಯ ನಿರ್ದೇಶಕರಾಗಿ ಹಾಗೂ ಉಡುಪಿ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದು, ರಾಜ್ಯದ ಪ್ರಮುಖ ಹಿಂದೂಸ್ತಾನಿ ಗಾಯಕರಾಗಿದ್ದು, ದೂರದರ್ಶನ ಮತ್ತು ಆಕಾಶವಾಣಿಯಲ್ಲಿ ಹಲವಾರು ಕಾರ್ಯಕ್ರಮಗಳನ್ನು ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!