ಉಡುಪಿ: ಅಗತ್ಯ ವಸ್ತುಗಳನ್ನು ಬೆಳಿಗ್ಗೆ 7ರಿಂದ 11ವರೆಗೆ ಖರೀದಿಸಿ:ತಪ್ಪಿದಲ್ಲಿ ಕ್ರಿಮಿನಲ್ ಮೊಕದ್ದಮೆ
ಉಡುಪಿ: ಕೊರೋನಾ ವೈರಸ್ ಕಾಯಿಲೆ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸೆಕ್ಷನ್ 144(3) ರಂತ ನಾಗರೀಕರ ಸಂಚಾರವನ್ನು ನಿರ್ಬಂಧಿಸಿ ಆದೇಶವನ್ನು ಹೊರಡಿಸಲಾಗಿದೆ. ಅದರಂತೆ ಜನರು ಹೊರಗಡೆ ಸಂಚರಿಸುವುದನ್ನು ಈಗಾಗಲೇ ನಿರ್ಬಂಧಿಸಲಾಗಿದೆ.
ಪ್ರಸ್ತುತ ಭಟ್ಕಳ ,ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಕಾಯಿಲೆಯ ಸೋಂಕು ಹೊಂದಿರುವ ಪ್ರಕರಣಗಳು ದಿನೇ ದಿನೇ ಜಾಸ್ತಿಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ನೀಡಲಾಗುವ ಅಗತ್ಯ ವಸ್ತುಗಳ ಸೇವೆಯನ್ನು ನಿಯಮಿತಗೊಳಿಸುವ ಅವಶ್ಯಕತೆ ಇದೆ. ಅಲ್ಲದೆ, ಈಗಾಗಲೇ ಕಾರ್ಕಳದಲ್ಲಿ ಬೆಳಿಗ್ಗೆ 7:00 ರಿಂದ 11:00ರ ವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಿ ಪ್ರಾಯೋಗಿಕವಾಗಿ ಜಾರಿಗೊಳಿಸಿದ್ದು, ಸದ್ರಿ ವ್ಯವಸ್ಥೆ ಫಲಪ್ರದವಾಗಿದೆ, ಆದುದರಿಂದ ಸಾರ್ವಜನಿಕರು ತಮಗೆ ಅಗತ್ಯವಿರುವ ದಿನಸಿ ಸಾಮಾಗ್ರಿಗಳು, ಔಷಧಗಳು ಮತ್ತಿತರ ಅವಶ್ಯಕ ಸಾಮಾಗ್ರಿಗಳನ್ನು ನಿಗಧಿತ ಸಮಯದಲ್ಲಿ ಮಾತ್ರ ಖರೀದಿಸಲು ಅವಕಾಶ ನೀಡಲು ತೀರ್ಮಾನಿಸಲಾಗಿದೆ.
ಬೆಳಿಗ್ಗೆ 7:00 ರಿಂದ 11:00 ಘಂಟೆಯವರೆಗೆ ಸಮಯ ನಿಗಧಿಪಡಿಸಲಾಗಿದ್ದು, ಅವಶ್ಯಕ ವಸ್ತುಗಳನ್ನು ಮಾರಾಟ ಮಾಡುವ ಅಂಗಡಿಗಳು ಈ ಸಮಯದಲ್ಲಿ ಮಾತ್ರ ತೆರೆಯಲು ಅವಕಾಶ ಕಲ್ಪಿಸಲಾಗಿದ್ದು ಸಾರ್ವಜನಿಕರು ತಮಗೆ ಅಗತ್ಯವಿರುವ ದಿನಸಿ/ತರಕಾರಿ/ಹಾಲು/ಹಣ್ಣುಹಂಪಲು/ ಮಾಂಸ, ಮೀನು ಮುಂತಾದ ಅವಶ್ಯಕ ಸಾಮಾಗ್ರಿಗಳನ್ನು ಈ ಅವಧಿಯಲ್ಲಿ ( Social Distance ) ಕಡ್ಡಾಯವಾಗಿ ಪಾಲಿಸತಕ್ಕದ್ದು. ನಿಗಧಿತ ಅವಧಿಯ ನಂತರ ಈ ಅಂಗಡಿಗಳನ್ನು ಮುಚ್ಚಬೇಕು ಹಾಗೂ ಈ ನಿರ್ಬಂಧ ಮೆಡಿಕಲ್ ಶಾಪ್‌ಗಳಿಗೆ ಅನ್ವಯಿಸುವುದಿಲ್ಲ. ರಸ್ತೆಗಳಲ್ಲಿ ಅನಗತ್ಯವಾಗಿ ಜನರು ಸಂಚರಿಸುವುದು ಕಂಡುಬಂದಲ್ಲಿ ಅಂತಹವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ನಿಯಮಾನುಸಾರ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಜಿಲ್ಲಾಧಿಕಾರಿ ಎಚ್ಚರಿಸಿದ್ದಾರೆ.
ಧನ್ಯವಾದಗಳು