ಉಡುಪಿ:ಚಂಡಮಾರುತ ಭೀತಿ ಇಂದು ಶಾಲಾ ಕಾಲೇಜ್ ಗೆ ರಜೆ:ಡಿಸಿ

ಉಡುಪಿ:ಅರಬ್ಬೀ ಸಮುದ್ರದಲ್ಲಿ ಕ್ಯಾರ್ ಚಂಡಮಾರುತ ಭೀತಿಯಿಂದ ಉಡುಪಿ ಜಿಲ್ಲಾ ಶಾಲಾ ಕಾಲೇಜಿಗೆ ಮುನ್ನೆಚ್ಚರಿಕೆ ಕ್ರಮವಾಗಿ ಇಂದು ರಜೆ ಘೋಷಣೆ ಮಾಡಲಾಗಿದೆ ಎಂದು  ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಮೌಖಿಕ ಆದೇಶ ಹೊರಡಿಸಿದ್ದಾರೆ.

ಕರಾವಳಿಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ. ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ವಿಸ್ತರಿಸಿದೆ. ಜನ ಎಚ್ಚರಿಕೆಯಿಂದ ಇರಬೇಕೆಂದು ಸೂಚಿಸಿದೆ.

ಮಳೆಯಬ್ಬರ ಆಯ್ತು. ಇನ್ನೊಂದು ವಾರ ಚಂಡಮಾರುತದ ಭೀತಿ. ಇಂದು ದಕ್ಷಿಣ, ಉತ್ತರ ಕನ್ನಡ ಕರಾವಳಿ ಜಿಲ್ಲೆಗಳು, ಮಹಾರಾಷ್ಟ್ರದ ಕೊಂಕಣ ಮತ್ತು ಗೋವಾ ತೀರ ಪ್ರದೇಶಗಳಿಗೆ ಕ್ಯಾರ್ ಚಂಡಮಾರುತ ಅಪ್ಪಳಿಸಲಿದೆ.

ಈ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ, ಉಡುಪಿ ಜಿಲ್ಲೆ ಹಾಗೂ ಮೂಡಿಗೆರೆ ತಾಲೂಕಿನ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ. ಅರಬ್ಬೀ ಸಮುದ್ರದಲ್ಲಿ ಕ್ಯಾರ್ ಚಂಡಮಾರುತ ಎದ್ದಿದ್ದು, ಕರಾವಳಿಗೆ ಹಿಂಗಾರು ಅಪ್ಪಳಿಸುವ ಭೀತಿ ಎದುರಾಗಿದೆ.

ಕ್ಯಾರ್ ಚಂಡಮಾರುತ ಗಾಳಿ ಮಳೆ ಹೊತ್ತು ತರುತ್ತಿದೆ. ಈ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಇಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಮೌಖಿಕ ಆದೇಶ ಹೊರಡಿಸಿದ್ದಾರೆ.

ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ, ಮೀನುಗಾರರಿಗೆ, ನದಿ ಬದಿಯ ಜನ ನೀರಿಗಿಳಿಯದಂತೆ ಸೂಚಿಸಿದೆ. ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆಯಾಗಿದ್ದು, ಅದು ವಿಸ್ತರಣೆಗೊಳ್ಳುವ ಸಾಧ್ಯತೆ ಇದೆ.

ಇತ್ತ ಗೋವಾದ ಬೇತುಲ್‍ನಲ್ಲಿ ಅಲೆಯಬ್ಬರಕ್ಕೆ ಮುಳುಗ್ತಿದ್ದ ದೋಣಿಯಲ್ಲಿದ್ದವರನ್ನ ರಕ್ಷಣೆ ಮಾಡಲಾಗಿದೆ. ಮುರುಡೇಶ್ವರ ಕಡಲ ತೀರದಲ್ಲಿ ಅಂಗಡಿಗಳಿಗೆ ಸಮುದ್ರದ ಅಲೆ ನುಗ್ಗಿ ವಸ್ತುಗಳೆಲ್ಲ ಕೊಚ್ಚಿಕೊಂಡು ಹೋಗಿದೆ. ಗುರುವಾರದಿಂದಲೇ ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆ ಆಗುತ್ತಿದ್ದು, ಸಮುದ್ರದಲ್ಲಿ ಅಲೆಗಳು ಅಬ್ಬರಿಸುತ್ತಿವೆ. ಸಮುದ್ರ ಕೊರೆತ ಉಂಟಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲೂ ನಿನ್ನೆ ಸಂಜೆಯಿಂದಲೇ ಬಿರುಗಾಳಿ ಮಳೆಯಾಗುತ್ತಿದ್ದು, ಮೂಡಿಗೆರೆ ತಾಲೂಕಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ.

Leave a Reply

Your email address will not be published. Required fields are marked *

error: Content is protected !!