ಉಡುಪಿ:ಮುಂದುವರಿದ ಚಂಡಮಾರುತ ಅ.26ಶಾಲಾ ಕಾಲೇಜ್ ಗೆ ರಜೆ
ಉಡುಪಿ: ತೀವ್ರ ಮಳೆ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ( ಅ.26) ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ. ಕಳೆದ ಎರಡು ದಿನಗಳಿಂದ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ಚಂಡಮಾರುತದಿಂದ ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತಿದ್ದು, ಮಳೆ-ಗಾಳಿಗೆ ಎರಡು ಜೀವಗಳು ಬಲಿಯಾಗಿವೆ.
ಕಾಪು ತಾಲೂಕಿನ ಕುರ್ಕಾಲು ಗ್ರಾಪಂ ವ್ಯಾಪ್ತಿಯ ಕುಂಜಾರುಗಿರಿಯ ಚಂದ್ರಶೇಖರ ಎಂಬವರ ಪತ್ನಿ ಸುಲೋಚನಾ (42) ನಿನ್ನೆ ಹುಲ್ಲು ತರಲೆಂದು ಗದ್ದೆಗೆ ತೆರಳಿದ್ದ ಅವರು ಸಂಜೆ ವೇಳೆ ಶಂಖತೀರ್ಥ ಎಂಬಲ್ಲಿ ತುಂಬಿದ ತೋಡೊಂದನ್ನು ದಾಟುವಾಗ ಅಕಸ್ಮಿಕವಾಗಿ ಕಾಲುಜಾರಿ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಇನ್ನೊಂದು ಘಟನೆ ಉಡುಪಿ ತಾಲೂಕು ಕುಕ್ಕೆಹಳ್ಳಿ ಗ್ರಾಪಂ ವ್ಯಾಪ್ತಿಯ ಸಾಂತಜೆಡ್ಡು ಎಂಬಲ್ಲಿ ರಾತ್ರಿ ೯ಗಂಟೆಯ ಸುಮಾರಿಗೆ ಮರವೊಂದು ಮನೆಯ ಮೇಲೆ ಉರುಳುವಾಗ ಮಳೆಗಾಗಿ ಆ ಮನೆಯಲ್ಲಿ ಆಶ್ರಯ ಪಡೆದಿದ್ದ ಕುಕ್ಕೆಹಳ್ಳಿಯ ರಿಕ್ಷಾ ಚಾಲಕರಾದ ರವೀಂದ್ರ ಕುಲಾಲ್ (35) ಅವರು ಅದರಡಿ ಸಿಲುಕಿ ಸ್ಥಳದಲ್ಲೇ ಮೃತಪಟ್ಟರೆಂದು ತಿಳಿದುಬಂದಿದೆ.
Degree students ge raje beda.. Exam continue maadi..
Is on 30th Oct is holiday