ಉಡುಪಿ: ನ್ಯಾಯಾಧೀಶರ ಮನೆಯಲ್ಲೇ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

ಉಡುಪಿ : ಜಿಲ್ಲಾ ಪ್ರಧಾನ ನ್ಯಾಯಾಧೀಶರ ಮನೆಯಲ್ಲೇ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವುಗೈದ ಘಟನೆ ನಡೆದಿದೆ.
ಅಜ್ಜರಕಾಡು ಕೃಷ್ಣಾನುಗೃಹ ವಸತಿ ಗೃಹದಲ್ಲಿ ಕಳೆದ ಆಗಸ್ಟ್ 11 ರಂದು ಮನೆಯ ಕಪಾಟಿನಲ್ಲಿ ಇಟ್ಟಿದ 138 ಗ್ರಾಂ ತೂಕದ ಚಿನ್ನಾಭರಣವನ್ನು ಕಳ್ಳರು ದೊಚಿದ್ದಾರೆ.
ಒಡವೆಗಳನ್ನು ಬ್ಯಾಂಕ್ ಲಾಕರ್‌ನಲ್ಲಿ ಇಡಲು ಮನೆಯ ಕಪಾಟಿನಲ್ಲಿ ಇಟ್ಟಿದ್ದ ಆಭರಣ ನಾಪತ್ತೆಯಾಗಿದೆಂದು ಜಿಲ್ಲಾ ಪ್ರಧಾನ ನ್ಯಾಯಾಧೀಶರಾದ ಸಿ. ಎಂ. ಜೋಶಿ ಅವರ ಪತ್ನಿ ಶೈಲಜಾ ಜೋಶಿ ಉಡುಪಿ ನಗರ ಠಾಣೆಗೆ ದೂರು ನೀಡಿದ್ದಾರೆ. ಆಗಸ್ಟ್11 ರಿಂದ ನವೆಂಬರ್ 28 ರ ಅವಧಿಯಲ್ಲಿ ಕಳ್ಳತನವಾಗಿರುವ ಬಗ್ಗೆ ದೂರಿನಲ್ಲಿ ತಿಳಿಸಲಾಗಿದೆ. ಕಳವುಗೈದ ಚಿನ್ನಾಭರಣದ ಮೌಲ್ಯ ರೂಪಾಯಿ 4,80,000 ಎಂದು ದೂರಿನಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!