ಪ್ರಮೋದ್ ಮಧ್ವರಾಜ್ ಹುಟ್ಟುಹಬ್ಬ: ಅಭಿಮಾನಿ ಬಳಗದಿಂದ ರಕ್ತದಾನ ಶಿಬಿರ
ಉಡುಪಿ(ಉಡುಪಿ ಟೈಮ್ಸ್ ವರದಿ):ಮಾಜಿ ಮೀನುಗಾರಿಕಾ ಸಚಿವ ಹಾಗು ಉಡುಪಿ ಜಿಲ್ಲಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಪ್ರಮೋದ್ ಮಧ್ವರಾಜ್ ಅವರ ಹುಟ್ಟುಹಬ್ಬದ ಪ್ರಯುಕ್ತವಾಗಿ, ಪ್ರಮೋದ್ ಮಧ್ವರಾಜ್ ಅಭಿಮಾನಿ ಬಳಗ ಉಡುಪಿ ಜಿಲ್ಲೆ ಇದರ ನೇತೃತ್ವದಲ್ಲಿ ರಕ್ತದಾನ ಶಿಬಿರವು ನಡೆಯಲಿದೆ.
ಮಣಿಪಾಲ ಆಸ್ಪತ್ರೆ ರಕ್ತನಿಧಿ ಕೇಂದ್ರದ ಸಹಯೋಗದಲ್ಲಿ ಅ .17 ರಂದು ಬೆಳಗ್ಗೆ 9 ರಿಂದ ಮಧ್ಯಾಹ್ನ 2ಗಂಟೆಯವರೆಗೆ ಈ ಶಿಬಿರವು ನಡೆಯಲಿದ್ದು, ಶಿಬಿರವನ್ನು ಬೆಳಿಗ್ಗೆ 11 ಗಂಟೆಗೆ ಪ್ರಮೋದ್ ಮಧ್ವರಾಜ್ ಉದ್ಘಾಟಿಸಲಿದ್ದು, ಅತಿಥಿಗಳಾಗಿ ಮಣಿಪಾಲ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಅವಿನಾಶ್ ಶೆಟ್ಟಿ, ಡಾ. ಶ್ರುತಿ ಅವರು ಉಪಸ್ಥಿತರಿವರು ಎಂದು ಪ್ರಕಟಣೆ ತಿಳಿಸಿದೆ.