ಹೆಲ್ಮೆಟ್ ಹಾಕದೆ ವಾಹನ ಚಾಲನೆ: ಮೂರು ತಿಂಗಳ ಪರವಾನಿಗೆ ರದ್ದು

ಬೆಂಗಳೂರು(ಉಡುಪಿ ಟೈಮ್ಸ್ ವರದಿ): ಹೆಲ್ಮೆಟ್ ಹಾಕದೆ ವಾಹನ ಚಲಾಯಿಸಿದರೆ ಮೊದಲೆಲ್ಲ ಕೇವಲ ದಂಡದಲ್ಲಿ ಮುಗಿಸುತ್ತಿದ್ದ ಇಲಾಖೆ ಇದೀಗ ಮೂರು ತಿಂಗಳು ಪರವಾನಗಿ ಅಮಾನತು ಮಾಡಲು ಸಾರಿಗೆ ಇಲಾಖೆ ಆದೇಶ ನೀಡಿದೆ.

ರಾಜ್ಯ ಸರ್ಕಾರ ಈ ಬಗ್ಗೆ ಆದೇಶ ಹೊರಡಿಸಿದ್ದು, ಕೇಂದ್ರ ಮೋಟಾರು ವಾಹನ ಕಾಯ್ದೆಯ ಪ್ರಕಾರ ದ್ವಿಚಕ್ರ ಸವಾರರು ( ಹಿಂಬದಿ ಸವಾರ ಸೇರಿದಂತೆ) ಹೆಲ್ಮೆಟ್ ಧರಿಸುವುದು ಕಡ್ಡಾಯವಾಗಿದೆ.

ಹೀಗಾಗಿ ಇನ್ನು ಮುಂದೆ ಹೆಲ್ಮೆಟ್ ಧರಿಸದೇ ಸಂಚರಿಸುವ ಎಲ್ಲಾ ವಾಹನ ಸವಾರರ ವಿರುದ್ಧ ಮೊಟಾರು ವಾಹನಗಳ ಕಾಯ್ದೆ 1988ರ ಕಲಂ 194-ಟಿ ಅನ್ವಯ, ದಂಡ ವಸೂಲಾತಿಯೊಂದಿಗೆ ವಾಹನ ಸವಾರರ ಚಾಲನಾ ಪರವಾನಗಿಯನ್ನು ಕನಿಷ್ಠ ಮೂರು ತಿಂಗಳ ಅವಧಿಗೆ ಅಮಾನತ್ತುಗೊಳಿಸಲು ತಕ್ಷಣದಿಂದ ಜಾರಿಗೆ ತರಲು ಸರ್ಕಾರ ಆದೇಶ ನೀಡಿದೆ.

Leave a Reply

Your email address will not be published. Required fields are marked *

error: Content is protected !!