ಉದ್ಯಾವರ ಗ್ರಾಮ ಪಂಚಾಯತ್‌ನ ಸದಸ್ಯ ಲಾರೆನ್ಸ್ ಡೇಸ ಇನ್ನಿಲ್ಲ
ಉಡುಪಿ: ಉದ್ಯಾವರ ಗ್ರಾಮ ಪಂಚಾಯತ್ ನ ಹಿರಿಯ ಸದಸ್ಯ, ಸಂತ ಫ್ರಾನ್ಸಿಸ್ ಕ್ಸೇವಿಯರ್ ದೇವಾಲಯದ ಪಾಲನ ಮಂಡಳಿಯ ಉಪಾಧ್ಯಕ್ಷರಾದ ಲಾರೆನ್ಸ್ ಡೇಸ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಲಾರೆನ್ಸ್ ಡೆಸಾ ಅವರ ಪತ್ನಿ ಶಿಕ್ಷಕಿ ಜುಲಿಯಾನಾ ಡೆಸಾ ಗುರುವಾರ ಅಸೌಖ್ಯದಿಂದಾಗಿ ಮನೆಯಲ್ಲೇ ಮೃತಪಟ್ಟಿದ್ದರು. ಅದರ ಬೆನ್ನಲ್ಲೆ ಪತಿ ಲಾರೆನ್ಸ್ ಡೆಸಾ ಕೂಡ ಪತ್ನಿಯ ಸಾವಿನಿಂದ ಆಘಾತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದು ಶುಕ್ರವಾರ ಸಂಜೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಲಾರೆನ್ಸ್ ಡೆಸಾ ಅವರು ಉದ್ಯಾವರ ಗ್ರಾಮ ಪಂಚಾಯತ್ ನ ಹಿರಿಯ ಸದಸ್ಯರಾಗಿದ್ದು ಸ್ಥಳೀಯ ಚರ್ಚಿನ ಪಾಲನಾ ಮಂಡಳಿಯ ಉಪಾಧ್ಯಕ್ಷರಾಗಿ ಕೂಡ ಸೇವೆ ಸಲ್ಲಿಸುತ್ತಿದ್ದರು. ಸ್ಥಳೀಯ ಲಯನ್ಸ್ ಹಾಗೂ ಇನ್ನಿತರ ಸಂಘಟನೆಗಳಲ್ಲಿ ಸಕ್ರೀಯ ಪದಾಧಿಕಾರಿಯಾಗಿ, ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದರು.
ಮೃತರು ಪುತ್ರ, ಹಾಗೂ ಪುತ್ರಿಯನ್ನು ಹಾಗೂ ಅಪಾರ ಬಂಧು ವರ್ಗವನ್ನು ಅಗಲಿದ್ದಾರೆ.
R I P