ಶ್ರೀರಾಮ್ ಫೈನಾನ್ಸ್ ಲಿಮಿಟೆಡ್: ಜ.4ರಂದು ಸಾವಿರ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ
ಉಡುಪಿ: ದೇಶದ ಪ್ರಖ್ಯಾತ ಖಾಸಗಿ ಹಣಕಾಸು ಸಂಸ್ಥೆ ಶ್ರೀ ರಾಮ್ ಫೈನಾನ್ಸ್ ಲಿಮಿಟೆಡ್ ವತಿಯಿಂದ ಜನವರಿ 4 ರಂದು ಉಡುಪಿಯ ಬನ್ನಂಜೆ ಶ್ರೀನಾರಾಯಣ ಗುರು ಸಭಾ ಭವನದಲ್ಲಿ ಬೆಳಿಗ್ಗೆ 10 ಗಂಟೆಗೆ ಒಂದು ಸಾವಿರ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ ನಡೆಯಲಿದೆ.
ಈ ಕಾರ್ಯಕ್ರಮವು ಶ್ರೀರಾಮ್ ಫೈನಾನ್ಸ್ ನ ಅಧಿಕಾರಿಗಳ ಸಮ್ಮುಖ ವಿಧಾನ ಪರಿಷತ್ ಸದಸ್ಯರು ಮತ್ತು ಶಾಸಕರು ಮತ್ತು ಇತರ ಗಣ್ಯರ ಉಪಸ್ಥಿತಿಯಲ್ಲಿ ನಡೆಯಲಿದೆ.
ಒಟ್ಟು 2.5 ಲಕ್ಷ ಕೋಟಿ ವಹಿವಾಟು ಹೊಂದಿರುವ ಈ ಸಂಸ್ಥೆ ದೇಶದಾದ್ಯಂತ ಸುಮಾರು ನಾಲ್ಕು ಸಾವಿರಕ್ಕಿಂತಲೂ ಹೆಚ್ಚು ಶಾಖೆ ಹೊಂದಿದ್ದು, ಈ ಸಂಸ್ಥೆಯು ತನ್ನ ಸಾಮಾಜಿಕ ಜವಾಬ್ದಾರಿ ಕಾರ್ಯಕ್ರಮದಡಿಯಲ್ಲಿ ವಿದ್ಯಾರ್ಥಿ ವೇತನ ನೀಡುತ್ತಿದ್ದು ಇದಕ್ಕಾಗಿ ಸುಮಾರು 25 ಕೋಟಿ ರೂ. ಅನುದಾನ ಪ್ರತಿ ವರ್ಷ ಮೀಸಲಿಡುತ್ತಿದೆ ಎಂದು ಶ್ರೀ ರಾಮ್ ಫೈನಾನ್ಸ್ ಲಿಮಿಟೆಡ್ ಸಂಸ್ಥೆಯ ವಿಭಾಗೀಯ ಅಧಿಕಾರಿ ಸದಾಶಿವ ಅಮೀನ್ ಕಟ್ಟೆಗುಡ್ಡೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.