ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಸರ್ವರನ್ನೂ ಸ್ಮರಿಸೋಣ: ಕುಯಿಲಾಡಿ
ಉಡುಪಿ: ಲಕ್ಷಾಂತರ ಮಂದಿ ಸ್ವಾತಂತ್ರ್ಯ ಹೋರಾಟಗಾರರ ಸಂಘಟಿತ ಪರಿಶ್ರಮ, ತ್ಯಾಗ, ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರಕಿದೆ. ಅವರೆಲ್ಲರನ್ನೂ ನಾವು ಸ್ಮರಿಸಬೇಕಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.
ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾ ಕಛೇರಿಯ ಬಳಿ ನಡೆದ 74ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣಗೈದು ಮಾತನಾಡಿದರು.
ದೇಶದ ಸ್ವಾತಂತ್ರ್ಯ ಸಂಗ್ರಾಮದ ಹಲವಾರು ವರ್ಷಗಳಲ್ಲಿ ಸುಮಾರು 6 ಲಕ್ಷ ಮಂದಿ ದೇಶ ಭಕ್ತರು ವಿವಿಧ ಚಳುವಳಿಯಲ್ಲಿ ಭಾಗವಹಿಸಿದ್ದಾರೆಂದು ಅಂದಾಜಿಸಲಾಗಿದೆ. ಆದರೆ ಇತ್ತೀಚಿಗಿನ ಕೆಲವು ವರ್ಷಗಳಲ್ಲಿ ಸ್ವಾತಂತ್ರ್ಯ ಹೋರಾಟದ ಬಗ್ಗೆ ಕೆಲವೇ ಕುಟುಂಬಗಳನ್ನು ವೈಭವೀಕರಿಸಲಾಗುತ್ತಿದೆ. ಇನ್ನು ಮುಂದಕ್ಕೆ ಹೀಗಾಗದೆ ಸಮಸ್ತ ಸ್ವಾತಂತ್ರ್ಯ ಹೋರಾಟಗಾರು ಹಾಗೂ ದೇಶ ರಕ್ಷಣೆಯ ಪುಣ್ಯ ಕಾಯಕದಲ್ಲಿ ನಿರತರಾಗಿರುವ ದೇಶದ ಹೆಮ್ಮೆಯ ವೀರ ಯೋಧರನ್ನು ಸ್ಮರಿಸುವಂತಾಗಬೇಕು ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷರಾದ ಬಿ.ರವಿ ಅಮೀನ್, ಪೆರ್ಣಂಕಿಲ ಶ್ರೀಶ ನಾಯಕ್, ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್, ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ, ಗಿರೀಶ್ ಎಮ್. ಅಂಚನ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ದಿನಕರ ಪೂಜಾರಿ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕರ್, ಜಿಲ್ಲಾ ಹಿಂ.ವರ್ಗಗಳ ಮೋರ್ಚಾ ಪ್ರ.ಕಾರ್ಯದರ್ಶಿ ಸತೀಶ್ ಕುಲಾಲ್, ಬಿಜೆಪಿ ನಗರ ಪ್ರ.ಕಾರ್ಯದರ್ಶಿ ಮಂಜುನಾಥ್ ಮಣಿಪಾಲ್, ನಗರ ಯುವ ಮೋರ್ಚಾ ಅಧ್ಯಕ್ಷ ರೋಶನ್ ಶೆಟ್ಟಿ, ಜಿಲ್ಲಾ ಸಾಮಾಜಿಕ ಜಾಲತಾಣ ಪ್ರಕೋಷ್ಠದ ಸಂಚಾಲಕ ಚಂದ್ರಶೇಖರ ಪ್ರಭು, ಜಿಲ್ಲಾ ಮಾಹಿತಿ ತಂತ್ರಜ್ನಾನ ಪ್ರಕೋಷ್ಠದ ಸಂಚಾಲಕ ಅಕ್ಷಯ್ ಪಿ. ಶೆಟ್ಟಿ, ಜಿಲ್ಲಾ ಯುವ ಮೋರ್ಚಾ ನಿಕಟಪೂರ್ವ ಪ್ರ.ಕಾರ್ಯದರ್ಶಿ ಪ್ರತಾಪ್ ಶೆಟ್ಟಿ, ಕಾರ್ಯಾಲಯ ಕಾರ್ಯದರ್ಶಿ ಶಿವರಾಮ್ ಕಾಡಿಮಾರ್, ಚೈತ್ರಾ ಜತ್ತನ್, ಲಕ್ಷೀ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.