ಹೆಬ್ರಿ ತಾಲೂಕು ವ್ಯಾಪಕ ಮಳೆ: ನಾಳೆ (ಜು.5) ಶಾಲಾ ಕಾಲೇಜುಗೆ ರಜೆ ಘೋಷಣೆ

ಉಡುಪಿ ಜು.4(ಉಡುಪಿ ಟೈಮ್ಸ್ ವರದಿ): ಜಿಲ್ಲೆಯ ಹೆಬ್ರಿ ತಾಲೂಕಿನಲ್ಲಿ ಮುಂಜಾನೆಯಿಂದ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆ ತಾಲೂಕು ವ್ಯಾಪ್ತಿಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಹೆಬ್ರಿ ತಾಲೂಕಿನಲ್ಲಿ ಮುಂದಿನ ಎರಡು ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿರುವುದರಿಂದ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ನಾಳೆ(ಜು.5) ಹೆಬ್ರಿ ತಾಲೂಕು ವ್ಯಾಪ್ತಿಯ ಅಂಗನವಾಡಿ, ಸರಕಾರಿ ಖಾಸಗಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಮತ್ತು ಪದವಿ ಪೂರ್ವ, ಪದವಿ ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್ ಅವರು ಆದೇಶ ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!