ಕರಾವಳಿಯಲ್ಲಿ ಜು.5-7 ರ ವರೆಗೆ ಭಾರೀ ಗಾಳಿ ಮಳೆ- ಆರೆಂಜ್ ಅಲರ್ಟ್ ಘೋಷಣೆ

ಉಡುಪಿ ಜು.4(ಉಡುಪಿ ಟೈಮ್ಸ್ ವರದಿ): ರಾಜ್ಯದ ಕರಾವಳಿಯಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಗಾಳಿ ಮಳೆ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ರಾಜ್ಯದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜು.5 ರಿಂದ ಜು.7 ರ ವರೆಗೆ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಮುಂಜಾಗ್ರತಾ ಕ್ರಮವಾಗಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಇನ್ನು ರೈತರಿಗೆ ಕೃಷಿ ಚಟುವಟಿಕೆಗಳನ್ನು ಮುಂದೂಡುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದ್ದು, ಕರಾವಳಿಯಲ್ಲಿ ಮೀನುಗಾರಿಕೆಗಾಗಿ ಸಮುದ್ರಕ್ಕೆ ಇಳಿಯದಂತೆ  ಮೀನುಗಾರರಿಗೆ ಎಚ್ಚರಿಕೆ ನೀಡಿದೆ.

Leave a Reply

Your email address will not be published. Required fields are marked *

error: Content is protected !!