ಕರಾವಳಿ ಜಿಲ್ಲೆಗಳಲ್ಲಿ ಮತ್ತೆ ಐದು ದಿನ ‘ಯೆಲ್ಲೊ ಅಲರ್ಟ್’

ಬೆಂಗಳೂರು: ರಾಜ್ಯದ ಉಡುಪಿ, ದಕ್ಷಿಣ ಕನ್ನಡ, ಯಾದಗಿರಿ, ವಿಜಯಪುರ, ಕಲಬುರ್ಗಿ, ಬೀದರ್, ಬೆಳಗಾವಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆ.16ರಂದು ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ.

ಕರಾವಳಿ ಜಿಲ್ಲೆಗಳಲ್ಲಿ ಆ.16ರಿಂದ 20ರವರೆಗೆ ಹೆಚ್ಚು ಮಳೆಯಾಗುವ ನಿರೀಕ್ಷೆಯಿದ್ದು, ಐದೂ ದಿನ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನಲ್ಲಿ ಮಳೆ ಪ್ರಮಾಣ ತಗ್ಗಿದ್ದು, ಕೆಲವೆಡೆ ಸಾಧಾರಣ ಮಳೆಯಾಗಬಹುದು.

Leave a Reply

Your email address will not be published. Required fields are marked *

error: Content is protected !!