ಅಂಡಾಣು ಮಾರಾಟ ಜಾಲ- ನಾಲ್ಕು ಆಸ್ಪತ್ರೆಗಳಿಗೆ ಬೀಗ ಜಡಿದ ಆರೋಗ್ಯ ಇಲಾಖೆ!
ಚೆನ್ನೈ, ಜು.14: ತಮಿಳುನಾಡಿನಲ್ಲಿ ಅಂಡಾಣು ಮಾರಾಟ ಜಾಲ ಪತ್ತೆ ಹಚ್ಚಿದ ಅಲ್ಲಿನ ಆರೋಗ್ಯ ಇಲಾಖೆ ಅಧಿಕಾರಿಗಳು ನಾಲ್ಕು ಆಸ್ಪತ್ರೆಗಳಿಗೆ ಬೀಗ ಜಡಿದಿದ್ದಾರೆ.
ಅಂಡಾಣು ಮಾರಾಟ ಮಾಡುವುದು ಕಾನೂನು ಬಾಹಿರವಾಗಿದ್ದು, ಈ ಆಸ್ಪತ್ರೆಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ದೂರು ದಾಖಲಿಸಲಾಗಿದೆ. 18 ರಿಂದ 20 ವಯಸ್ಸಿನ ಯುವತಿಯರ ಅಂಡಾಣುವನ್ನು ಶೇಖರಿಸಿ ಮಾರಾಟ ಮಾಡಲಾಗುತ್ತಿತ್ತು. ಇದರಲ್ಲಿ 16 ವರ್ಷ ವಯಸ್ಸಿನವರೂ ಹೆಚ್ಚಿನವರಿದ್ದಾರೆ ಎನ್ನಲಾಗಿದೆ.
ಇನ್ನು ಈ ಕುರಿತು ಮಾಹಿತಿ ನೀಡಿರುವ ತಮಿಳುನಾಡು ಆರೋಗ್ಯ ಸಚಿವ ಮಾ. ಸುಬ್ರಮಣಿಯನ್ ಅವರು, ಅಂಡಾಣು ಶೇಖರಿಸಿ ಮಾರಾಟ ಮಾಡುತ್ತಿದ್ದರಿಂದ ನಾಲ್ಕು ಆಸ್ಪತ್ರೆಗಳನ್ನು ಮುಚ್ಚಲಾಗಿದ್ದು, ತನಿಖೆಗೆ ಆದೇಶಿಸಲಾಗಿದೆ. ಈ ಆಸ್ಪತ್ರೆಗಳ ವಿರುದ್ಧ ಆರೋಪ ಸಾಬೀತಾದಲ್ಲಿ 50 ಲಕ್ಷ ರೂ. ದಂಡ ಹಾಗೂ ಭಾಗಿಯಾದ ವೈದ್ಯರಿಗೂ ಸಹ 10 ವರ್ಷ ಜೈಲು ಶಿಕ್ಷೆ ವಿಧಿಸಬಹುದಾಗಿದೆ ಎಂದು ತಿಳಿಸಿದ್ದಾರೆ.