ಬ್ರಹ್ಮಾವರ: ಮುಂಬೈಯಿಂದ ಬಂದಿದ್ದ ವ್ಯಕ್ತಿ ನೇಣಿಗೆ ಶರಣು
ಬ್ರಹ್ಮಾವರ ಜು.20 (ಉಡುಪಿ ಟೈಮ್ಸ್ ವರದಿ) : ದೃಷ್ಠಿ ದೋಷ ಸಮಸ್ಯೆಯಿಂದ ಮನನೊಂದು ವ್ಯಕ್ತಿಯೊಬ್ಬರು ನೆಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರದ ಹೊಸಾಳ ಗ್ರಾಮದಲ್ಲಿ ನಡೆದಿದೆ.
ಚಂದ್ರಶೇಖರ ಶೆಟ್ಟಿ (58) ಆತ್ಮಹತ್ಯೆ ಮಾಡಿಕೊಂಡವರು.
ಹೆಂಡತಿ ಮಕ್ಕಳೊಂದಿಗೆ ಮುಂಬಯಿಯಲ್ಲಿ ವಾಸವಾಗಿದ್ದ ಚಂದ್ರಶೇಖರ ಶೆಟ್ಟಿ ಅವರು ಕಳೆದ ಒಂದು ತಿಂಗಳ ಹಿಂದೆ ಊರಿಗೆ ಬಂದಿದ್ದರು. ಹಾಗೂ ಒಂದು ವರ್ಷದಿಂದ ದೃಷ್ಠಿ ದೋಷದ ಸಮಸ್ಯೆಯಿಂದ ಬಳಲುತ್ತಿದ್ದು ಚಿಕಿತ್ಸೆ ಪಡೆದರೂ ಗುಣಮುಖವಾಗದೇ ಇರುವುದರಿಂದ ಮನನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ನಿನ್ನೆ ಮಧ್ಯಾಹ್ನದ ಅವಧಿಯಲ್ಲಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮೃತರ ತಮ್ಮ ಸಂತೋಷ ಶೆಟ್ಟಿ ಎಂಬವರು ನೀಡಿದ ಮಾಹಿತಿಯಂತೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆಯೊಂದೇ ಪರಿಹಾರವಲ್ಲ ಆತ್ಮಹತ್ಯೆ ಮಾಡಿಕೊಳ್ಳುವ ಸಂಭವನೀಯ ವ್ಯಕ್ತಿಗಳ ಗಮನಕ್ಕೆ, ಸಹಾಯವಾಣಿ ನಂಬರ್: 080 2572 2573, ಸಮರ್ಥನಂ ಆವರಣ, 15ನೇ ಕ್ರಾಸ್, ಹೆಚ್ಎಸ್ಆರ್ ಸೆಕ್ಟರ್-4,ಬೆಂಗಳೂರು.