ಬೈಂದೂರು: ಚಲಿಸುತ್ತಿದ್ದ ಆಟೋ ರಿಕ್ಷಾದ ಮೇಲೆ ವಿದ್ಯುತ್ ಕಂಬ ಬಿದ್ದು ಚಾಲಕ ಗಂಭೀರ
ಬೈಂದೂರು ಜು.21 (ಉಡುಪಿ ಟೈಮ್ಸ್ ವರದಿ): ಕೊಲ್ಲೂರು ರಾಷ್ಟ್ರೀಯ ಹೆದ್ದಾರಿಯ ಕಳವಾಡಿ ಎಂಬಲ್ಲಿ ಚಲಿಸುತ್ತಿದ್ದ ಆಟೋ ರಿಕ್ಷಾದ ಮೇಲೆ ವಿದ್ಯುತ್ ಕಂಬ ಬಿದ್ದು ಚಾಲಕ ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ಶಿರೂರು ಮೈದಿನಪುರದ ಹೊಸಮನೆ ನಿವಾಸಿ ಸದಾಶಿವ (45) ಗಾಯಗೊಂಡ ಚಾಲಕ. ಸದಾಶಿವ ಅವರು ರಾಷ್ಟ್ರೀಯ ಹೆದ್ದಾರಿಯ ಕಳವಾಡಿ ಎಂಬಲ್ಲಿನ ರಸ್ತೆಯಲ್ಲಿ ಸಾಗುತ್ತಿದ್ದಾಗ ಅಕಸ್ಮಿಕವಾಗಿ ರಸ್ತೆ ಪಕ್ಕದಲ್ಲಿದ್ದ ತೆಂಗಿನ ಮರ ತುಂಡಾಗಿ ವಿದ್ಯುತ್ ಕಂಬದ ಮೇಲೆ ಬಿದ್ದಿದೆ. ಈ ವೇಳೆ ವಿದ್ಯುತ್ ಕಂಬ ರಿಕ್ಷಾದ ಮೇಲೆ ಬಿದ್ದಿದ್ದು, ಇದರಿಂದ ರಿಕ್ಷಾ ಚಾಲಕ ಗಾಯಗೊಂಡಿದ್ದಾರೆ.
ಘಟನೆಯಲ್ಲಿ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ ಬೈಂದೂರು ಮೆಸ್ಕಾಂ ಸಿಬ್ಬಂದಿಗಳು ವಿದ್ಯುತ್ ಕಂಬ ತೆರವು ಕಾರ್ಯ ಮಾಡಿದ್ದಾರೆ ಎಂದು ತಿಳಿದು ಬಂದಿದೆ