ಸುಳ್ಳು ಸುದ್ದಿಗಳನ್ನು ಹರಡಿದ 747 ವೆಬ್ ಸೈಟ್,94 ಯೂಟ್ಯೂಬ್ ಚಾನೆಲ್ ಸ್ಥಗಿತ
ನವದೆಹಲಿ, ಜು.22: ದೇಶದ ಹಿತಾಸಕ್ತಿಗೆ ವಿರುದ್ಧವಾಗಿ ಕೆಲಸ ಮಾಡುವ ಯೂಟ್ಯೂಬ್ ಚಾನೆಲ್‍ಗಳ ವಿರುದ್ಧ ಕ್ರಮ ಕೈಗೊಳ್ಳುವ ಸಲುವಾಗಿ 2021-22 ರಲ್ಲಿ ದೇಶದಲ್ಲಿ 747 ವೆಬ್‍ಸೈಟ್‍ಗಳು, 94 ಯೂಟ್ಯೂಬ್ ಚಾನೆಲ್‍ಗಳನ್ನು ತೆಗೆದುಹಾಕಲಾಗಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಅವರು ಹೇಳಿದ್ದಾರೆ.
ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಸುಳ್ಳು ಸುದ್ದಿಗಳನ್ನು ಹರಡುವ ಮೂಲಕ ಮತ್ತು ಅಂತರ್ಜಾಲದಲ್ಲಿ ಪ್ರಚಾರವನ್ನು ಹರಡುವ ಮೂಲಕ ದೇಶದ ಸಾರ್ವಭೌಮತ್ವಕ್ಕೆ ವಿರುದ್ಧವಾಗಿ ಕೆಲಸ ಮಾಡುವ ಏಜೆನ್ಸಿಗಳ ವಿರುದ್ಧ ಸರಕಾರ ಬಲವಾಗಿ ಕ್ರಮ ಕೈಗೊಂಡಿದೆ. ಈ ನಿಟ್ಟಿನಲ್ಲಿ ಸಚಿವಾಲಯವು,
ಸೆಕ್ಷನ್ 69ಎ ಮಾಹಿತಿ ತಂತ್ರಜ್ಞಾನ ಕಾಯ್ದೆ 2000 ರ ಅಡಿಯಲ್ಲಿ 94 ಯೂಟ್ಯೂಬ್ ಚಾನೆಲ್‍ಗಳು, 19 ಸಾಮಾಜಿಕ ಮಾಧ್ಯಮ ಖಾತೆಗಳು ಮತ್ತು 747 ಯುಆರ್‍ಎಲ್‍ಗಳ ವಿರುದ್ಧ ಕ್ರಮ ಕೈಗೊಂಡಿದೆ ಮತ್ತು ಅವುಗಳನ್ನು ನಿರ್ಬಂಧಿಸಿದೆ ಎಂದು ಹೇಳಿದರು.