ಶಿಕಾರಿಪುರಕ್ಕಿನ್ನು ಬಿ.ವೈ.ವಿಜಯೇಂದ್ರ: ಮಹತ್ವದ ಘೋಷಣೆ ಮಾಡಿದ ಮಾಜಿ ಸಿಎಂ ಬಿಎಸ್’ವೈ

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಪುತ್ರ ಬಿ.ವೈ.ವಿಜಯೇಂದ್ರ ರಾಜಕೀಯ ಭವಿಷ್ಯದ ವಿಚಾರವಾಗಿ ಮಹತ್ವದ ನಿರ್ಧಾರ ಕೈಗೊಂಡಿದ್ದು, ಅದರಂತೆ ಶಿಕಾರಿಪುರ ಕ್ಷೇತ್ರವನ್ನು ಪುತ್ರ ವಿಜಯೇಂದ್ರಗೆ ಬಿಟ್ಟುಕೊಡುತ್ತಿದ್ದೇನೆ ಎಂದು ಘೋಷಿಸಿದ್ದಾರೆ.

ಅಂಜನಾಪುರದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಬಿ.ಎಸ್.ಯಡಿಯೂರಪ್ಪ ಅವರು, ನಾನು ಕ್ಷೇತ್ರ ಬಿಟ್ಟುಕೊಡುತ್ತಿರುವುದರಿಂದ ಶಿಕಾರಿಪುರದಲ್ಲಿ ವಿಜಯೇಂದ್ರ ಸ್ಪರ್ಧೆ ಮಾಡಲಿದ್ದಾರೆ. ಮೈಸೂರು ಭಾಗದಲ್ಲಿ ವಿಜಯೇಂದ್ರ ಸ್ಪರ್ಧೆಗೆ ಒತ್ತಡವಿದೆ. ಆದರೆ, ಇಲ್ಲಿ ಸ್ಥಾನ ತೆರವಾಗುವುದರಿಂದ ಅವರು ಸ್ಪರ್ಧಿಸುತ್ತಾರೆ ಎಂದರು.

ನನಗೆ ನೀಡಿದ ಸಹಕಾರದಂತೆ ಬಹಳ ದೊಡ್ಡ ಅಂತರದಿಂದ ಶಿಕಾರಿಪುರ ಜನರು ನನ್ನ ಮಗ ಬಿ.ವೈ.ವಿಜಯೇಂದ್ರ ಗೆಲ್ಲಿಸಬೇಕೆಂದು ಮನವಿ ಮಾಡಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!