ಮುಂಬೈನಲ್ಲಿ ಹೋಟೆಲ್ ಉದ್ಯಮಿಯಾಗಿದ್ದ, ಸ್ವಾಮೀಜಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆ
ಮಂಗಳೂರು ಜು.22: ಇಲ್ಲಿನ ಆಶ್ರಮ ತಲಕಳ ಧರ್ಮ ಚಾವಡಿಯಲ್ಲಿ ಇಂದು ಶ್ರೀಕೃಷ್ಣ ದೇವಿ ಪ್ರಸಾದ್ ಸ್ವಾಮೀಜಿ (51) ಅವರು ಶವವಾಗಿ ಪತ್ತೆಯಾಗಿದ್ದಾರೆ.
ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕಿತಸಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.
ಇನ್ನು ಶ್ರೀಕೃಷ್ಣ ದೇವಿ ಪ್ರಸಾದ್ ಸ್ವಾಮೀಜಿ ಅವರು ಸನ್ಯಾಸ ಸ್ವೀಕರಿಸುವ ಮೊದಲು ಮುಂಬೈನಲ್ಲಿ ಹೋಟೆಲ್ ಉದ್ಯಮಿಯಾಗಿದ್ದರು. ನಂತರ ಅವರು ಲೌಕಿಕ ಭೋಗಗಳನ್ನು ತ್ಯಜಿಸಿ ಕೊಳಂಬೆ ಗ್ರಾಮದ ತಲಕಳ ಕಂದಾವರ ಪಂಚಾಯತ್ ವ್ಯಾಪ್ತಿಯ ಬಳಿ ನಿರ್ಮಿಸಿದ ಆಶ್ರಮದಲ್ಲಿ ವಾಸಿಸುತ್ತಿದ್ದರು. ಅವರಿಗೆ ಮದುವೆಯಾಗಿದ್ದು, ಮಗಳಿದ್ದಾಳೆ ಎಂದು ತಿಳಿದು ಬಂದಿದೆ. ಸ್ವಾಮೀಜಿಯವರ ಪೂರ್ವಾಶ್ರಮದ ಪತ್ನಿ ಬಜಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದು ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.