ರಾಷ್ಟ್ರ ಪ್ರಶಸ್ತಿ ಪಡೆದ ಕರುನಾಡ ಸಿನಿಮಾಗಳು – ಡೊಳ್ಳು, ತಲೆದಂಡ, ಜೀಟಿಗೆ, ನಾದದ ನವನೀತ
ನವದೆಹಲಿ ಜು.23: 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ಪ್ರಧಾನ ಸಮಾರಂಭದಲ್ಲಿ ಕರ್ನಾಟಕದ 4 ಚಿತ್ರಗಳು ವಿವಿಧ ವಿಭಾಗಗಳಲ್ಲಿ ರಾಷ್ಟ್ರೀಯ ಚಲನ ಚಿತ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.
ವಿಶಿಷ್ಟ ಕಥಾಹಂದರ ಹೊಂದಿರುವ ‘ಡೊಳ್ಳು’ ಸಿನಿಮಾ, ಪರಿಸರ ಕಾಳಜಿಯ ಕಥಾವಸ್ತುವುಳ್ಳು ‘ತಲೆದಂಡ’ ಸಿನಿಮಾಗೆ ರಾಷ್ಟ್ರ ಪ್ರಶಸ್ತಿ ಒಲಿದಿದೆ. ‘ಅತ್ಯುತ್ತಮ ಕಲೆ ಹಾಗೂ ಸಾಂಸ್ಕøತಿಕ ಸಿನಿಮಾ’ ವಿಭಾಗದಲ್ಲಿ ಗಿರೀಶ್ ಕಾಸರವಳ್ಳಿ ನಿರ್ದೇಶನದ ‘ನಾದದ ನವನೀತ ಡಾ. ಪಿಟಿ ವೆಂಕಟೇಶ್ ಕುಮಾರ್’ ಚಿತ್ರಕ್ಕೆ ಪ್ರಶಸ್ತಿ ಬಂದಿದೆ. ಕೊವಿಡ್ 19 ಪ್ರೇರಿತ ಮೊಟ್ಟ ಮೊದಲ ತುಳು ಚಿತ್ರ ಎಂಬ ಕಾರಣಕ್ಕೆ “ಜೀಟಿಗೆ ” ಚಿತ್ರ ಗಮನ ಸೆಳೆದಿದ್ದು ಸಿನಿಮಾ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದೆ.
30 ಭಾಷೆಗಳ 300 ಫೀಚರ್ ಫಿಲ್ಮ್, 150 ನಾನ್-ಫೀಚರ್ ಫಿಲ್ಮ್ ಸೇರಿ 400ಕ್ಕೂ ಅಧಿಕ ಸಿನಿಮಾಗಳು ಅರ್ಜಿ ಸಲ್ಲಿಸಿದ್ದವು ಈ ಪೈಕಿ 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಡೆದ ಚಿತ್ರಗಳು ಹೀಗಿದೆ.
ಅತ್ಯುತ್ತಮ ನಟ: ಅಜಯ್ ದೇವಗನ್ ಮತ್ತು ಸೂರ್ಯ
ಅತ್ಯುತ್ತಮ ನಟಿ: ಅಪರ್ಣಾ ಬಾಲಮುರಳಿ
ಅತ್ಯುತ್ತಮ ಕನ್ನಡ ಸಿನಿಮಾ: ಡೊಳ್ಳು
ಅತ್ಯುತ್ತಮ ಕಥಾಚಿತ್ರ: ಸೂರರೈ ಪೋಟ್ರು
ಅತ್ಯುತ್ತಮ ಜನಪ್ರಿಯ ಚಿತ್ರ: ತಾನಾಜಿ
ಅತ್ಯುತ್ತಮ ನಿರ್ದೇಶಕ: ಸಚ್ಚಿದಾನಂದನ್ ಕೆ.ಆರ್
ಅತ್ಯುತ್ತಮ ಸಿನಿಮಾಸ್ನೇಹಿ ರಾಜ್ಯ: ಮಧ್ಯ ಪ್ರದೇಶ
ಅತ್ಯುತ್ತಮ ಆಡಿಯೋಗ್ರಫಿ: ಡೊಳ್ಳು ಕನ್ನಡ ಸಿನಿಮಾ
ಅತ್ಯುತ್ತಮ ಚಿತ್ರಕಥೆ: ಶಾಲಿನಿ ಉಷಾ ನಾಯರ್?, ಸುಧಾ ಕೊಂಗರು (ಸೂರರೈ ಪೋಟ್ರು)
ಅತ್ಯುತ್ತಮ ಹಿನ್ನೆಲೆ ಗಾಯಕಿ: ನಂಚಮ್ಮ (ಅಯ್ಯಪ್ಪನುಂ ಕೋಶಿಯುಂ)
ಅತ್ಯುತ್ತಮ ಹಿನ್ನೆಲೆ ಗಾಯಕ: ರಾಹುಲ್ ದೇಶಪಾಂಡೆ (ಮಿ ವಸಂತ್ ರಾವ್)
ಅತ್ಯುತ್ತಮ ಮಕ್ಕಳ ಸಿನಿಮಾ: ಸುಮಿ (ಮರಾಠಿ)
ಅತ್ಯುತ್ತಮ ಪರಿಸರ ಸಂರಕ್ಷಣಾ ಚಿತ್ರ: ತಲೆದಂಡ (ಕನ್ನಡ)
ಅತ್ಯುತ್ತಮ ತುಳು ಸಿನಿಮಾ: ಜೀಟಿಗೆ