ಹಿರಿಯಡ್ಕ: ಜು.24 ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ, ಪ್ರಚಾರ ಸಮಿತಿ, ಯುವ ಕಾಂಗ್ರೆಸ್ ಪದಗ್ರಹಣ
ಉಡುಪಿ ಜು.23 (ಉಡುಪಿ ಟೈಮ್ಸ್ ವರದಿ): ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ, ಕಾಪು ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ, ಹಾಗೂ ಕಾಪು ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜು.24 ರಂದು ಹಿರಿಯಡ್ಕದ ಕೋಟ್ನಕಟ್ಟೆಯ ಸುರಭಿ ಬ್ಯಾಂಕ್ವೆಟ್ ಹಾಲ್ ನಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.
ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸಂತೋಷ್ ಕುಲಾಲ್ ಪಕ್ಕಾಲ್, ಕಾಪು ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಚರಣ್ ವಿಠಲ್ ಕುದಿ, ಹಾಗೂ ಕಾಪು ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ನವೀನ್ ಸಾಲ್ಯಾನ್ ಅವರು ಆಯ್ಕೆಯಾಗಿದ್ದಾರೆ. ಇದರ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜು.24 ರಂದು ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಬಂಢಾರಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಅಮೃತ್ ಶೆಣೈ ಮೊದಲಾದವರು ಉಪಸ್ಥಿತರಿರಲಿದ್ದಾರೆ.