ಮಂಗಳೂರು ಜು.24: ಕಂಕನಾಡಿ ರೈಲ್ವೇ ನಿಲ್ದಾಣದ ಬಳಿ ಗೂಡ್ಸ್ ರೈಲೊಂದು ಹಳಿ ತಪ್ಪಿದ ಪರಿಣಾಮ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ.
ಗೂಡ್ಸ್ ರೈಲಿನ ಎರಡು ಬೋಗಿಗಳು ಹಳಿ ತಪ್ಪಿದ್ದು, ಪಕ್ಕದಲ್ಲೇ ಇದ್ದ ಕಂಬಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಕೂಡಲೇ ಸಿಬ್ಬಂದಿ ಕಾರ್ಯಚರಣೆ ನಡೆಸಿ ಬೋಗಿಗಳನ್ನು ತೆರವುಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ.