ಹೆಬ್ರಿ: ರಾಜ್ಯ ಮಟ್ಟದ ಕಬಡ್ಡಿ ಆಟಗಾರ ನಿಧನ
ಹೆಬ್ರಿ ಜು.23: ರಾಜ್ಯ ಮಟ್ಟದ ಕಬಡ್ಡಿ ಆಟಗಾರ, ಹೆಬ್ರಿ ತಾಲೂಕು ಮುದ್ರಾಡಿಯ ಬಲ್ಲಾಡಿ ನಿವಾಸಿ ಸುಶಾಂತ್ ಅನಾರೋಗ್ಯದಿಂದ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಅನಾರೋಗ್ಯಕ್ಕೀಡಾಗಿದ್ದ ಸುಶಾಂತ್(32) ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೃತರು ತಂದೆ ಗುಣಕರ್ ಶೆಟ್ಟಿ, ತಾಯಿ, ಸಹೋದರ ಸುದೀಪ್, ಸಹೋದರಿ ಚಿತ್ರಾ, ಪತ್ನಿ ಅಶ್ವಿತಾ ಹಾಗೂ 1 ವರ್ಷದ ಪುತ್ರನನ್ನು ಅಗಲಿದ್ದಾರೆ.
ಸುಶಾಂತ್ ಶೆಟ್ಟಿ ಉಡುಪಿಯ ಜ್ಯುವೆಲ್ಲರಿ ಮಳಿಗೆಯೊಂದರಲ್ಲಿ ಉದ್ಯೋಗಿಯಾಗಿದ್ದರು. ಕೆಲ ದಿನಗಳ ಹಿಂದೆ ಅವರಿಗೆ ಜ್ವರ ಕಾಣಿಸಿಕೊಂಡಿತ್ತು. ಜ್ವರ ತೀವ್ರಗೊಂಡ ಕಾರಣ ಶುಕ್ರವಾರ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವಿಪರೀತ ಜ್ವರದ ಕಾರಣ ಕಿಡ್ನಿ ಮತ್ತು ಲಿವರ್ ನ ಮೇಲೂ ಪರಿಣಾಮ ಬೀರಿದ್ದು, ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ತಡರಾತ್ರಿ ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಇನ್ನು ಸಾವಿಗೆ ನಿಖರ ಕಾರಣ ವೈದ್ಯಕೀಯ ವರದಿಯಿಂದ ಇನ್ನಷ್ಟೇ ತಿಳಿದು ಬರಬೇಕಿದೆ.