ಕಡಿಯಾಳಿ: ಬೈಕ್ ಡಿಕ್ಕಿ- ಪಾದಚಾರಿ ಸಾವು
ಉಡುಪಿ ಜು.23(ಉಡುಪಿ ಟೈಮ್ಸ್ ವರದಿ): ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಬುಲೆಟ್ ಬೈಕ್ ಡಿಕ್ಕಿ ಹೊಡೆದು ವ್ಯಕ್ತಿ ಮೃತಪಟ್ಟ ಘಟನೆ ಕಡಿಯಾಳಿ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಕಡಿಯಾಳಿಯ ಶೇಷಗಿರಿ (56) ಮೃತಪಟ್ಟವರು.
ಉಡುಪಿ ಕೃಷ್ಣ ಸ್ಟೋರ್ಸ್ ನಲ್ಲಿ ಸಾಮಾಗ್ರಿಗಳನ್ನು ಕಟ್ಟಿ ಕೊಡುವ ಕೆಲಸ ಮಾಡಿಕೊಂಡಿದ್ದ ಶೇಷಗಿರಿ ಅವರು ನಿನ್ನೆ ರಾತ್ರಿ ಕೆಲಸ ಮುಗಿಸಿ ನಡೆದುಕೊಂಡು ಬರುತ್ತಿದ್ದ ವೇಳೆ ಮಣಿಪಾಲ ಕಡೆಯಿಂದ ಉಡುಪಿ ಕಡೆಗೆ ವೇಗವಾಗಿ ನಿರ್ಲಕ್ಷ್ಯತನದಿಂದ ಬಂದ ಬುಲೆಟ್ ಸವಾರ ಪ್ರಶಾಂತ್ ಎಂಬಾತ ಶೇಷಗಿರಿ ಅವರಿಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ರಸ್ತೆಗೆ ಬಿದ್ದು ಗಂಬೀರ ಗಾಯಗೊಂಡ ಶೇಷಗಿರಿ ಅವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಿದ್ದು ಬಳಿಕ ಅಲ್ಲಿಂದ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದಾಗ ಆಸ್ಪತ್ರೆಯಲ್ಲಿ ಪರೀಕ್ಷಿಸಿದ ವೈದ್ಯರು ಅವರು ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಈ ಬಗ್ಗೆ ಮೃತರ ಮಗ ರತೀಶ್ ಭಂಡಾರಿ ಎಂಬವರು ನೀಡಿದ ದೂರಿನಂತೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.