ಕಬಡ್ಡಿ ಆಟದ ಮೈದಾನದಲ್ಲೇ ಹೃದಯಾಘಾತದಿಂದ ವಿದ್ಯಾರ್ಥಿ ಮೃತ್ಯು

ಚೆನ್ನೈ ಜು.26: ಕಬಡ್ಡಿ ಆಡುತ್ತಿರುವ ವೇಳೆ ಆಟದ ಮೈದಾನದಲ್ಲೇ ಹೃದಯಾಘಾತದಿಂದ ವಿದ್ಯಾರ್ಥಿಯೋರ್ವ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಕಡಲೂರು ಜಿಲ್ಲೆಯ ಪನ್ರುತಿ ಬಳಿಯ ಮನ್ನಾಡಿಕುಪ್ಪಂ ಗ್ರಾಮದಲ್ಲಿ ನಿನ್ನೆ ರಾತ್ರಿ ನಡೆದಿದೆ.

ಸೇಲಂ ಜಿಲ್ಲೆಯ ಖಾಸಗಿ ಕಾಲೇಜಿನ ದ್ವಿತೀಯ ವರ್ಷದ ಬಿಎಸ್ಸಿ ವಿದ್ಯಾರ್ಥಿ ವಿಮಲ್‌ರಾಜ್ (22) ಮೃತಪಟ್ಟವರು.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ವಿಲ್ಲುಪುರಂ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ರವಾನಿಸಲಾಗಿದೆ. 

ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನು ಮೃತ ಆಟಗಾರನ ತಂಡ ಪಂದ್ಯಾಟದಲ್ಲಿ ಗೆದ್ದಿದ್ದು, ಗೆದ್ದ ಟ್ರೋಫಿಯೊಂದಿಗೆ ವಿಮಲ್ ರಾಜ್ ಅವರ ಅಂತ್ಯ ಸಂಸ್ಕಾರವನ್ನು ನೆರವೇರಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!