ಕುಂದಾಪುರ: ಅಕ್ರಮ ದನ‌ ಸಾಗಟ- ಆರೋಪಿಯ ಗಡಿಪಾರು

ಕುಂದಾಪುರ: ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಕಳವು, ಅಕ್ರಮ ಜಾನುವಾರು ಸಾಗಾಟ ಮತ್ತು ಹಿಂಸೆ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಯನ್ನು ಗಡಿಪಾರು ಮಾಡಿ ಕುಂದಾಪುರ ಉಪವಿಭಾಗಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಕುಂದಾಪುರ ಗ್ರಾಮಾಂತರ ಠಾಣಾ ಸರಹದ್ದಿನ ಗುಲ್ವಾಡಿ ಗ್ರಾಮದ ಕಾಂಡ್ಲಗದ್ದೆ ನಿವಾಸಿ 43 ವರ್ಷ ಪ್ರಾಯದ ಅಬೂಬಕ್ಕರ್ ಎಂಬಾತ ಗಡಿಪಾರಾದ ಆರೋಪಿ. ಈತ ಹಲವಾರು ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ತನ್ನ ಸಹಚರರೊಂದಿಗೆ ತಮ್ಮದೇ ಆದ ಒಂದು ತಂಡವನ್ನು ಕಟ್ಟಿಕೊಂಡು, ಕಳವು, ಅಕ್ರಮ ಜಾನುವಾರು ಸಾಗಾಟ ಮತ್ತು ಹಿಂಸೆ ಪ್ರಕರಣಗಳಲ್ಲಿ ಭಾಗಿಯಾಗಿದ್ದನು. ಈತನ ವಿರುದ್ದ 9 ಪ್ರಕರಣಗಳು ದಾಖಲಾಗಿವೆ.

Leave a Reply

Your email address will not be published. Required fields are marked *

error: Content is protected !!