ಬೆಳ್ಳಾರೆ: ಬಿಜೆಪಿಗೆ ಧಿಕ್ಕಾರ ಕೂಗಿದ ಪ್ರತಿಭಟನಾಕಾರರು- ಪೊಲೀಸರಿಂದ ಲಾಠಿ ಚಾರ್ಜ್
ಬೆಳ್ಳಾರೆ: ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯಿಂದಾಗಿ ಬಿಜೆಪಿ ಕಾರ್ಯಕರ್ತರಲ್ಲಿ ನಿರಾಶೆ ಮೂಡಿದ್ದು, ಮೃತದೇಹದ ಬಳಿಗೆ ತಡವಾಗಿ ಬಂದ ಬಿಜೆಪಿ ಸಂಸದರು, ಶಾಸಕರು, ಸಚಿವರ ಮೇಲೆ ಆಕ್ರೋಶವನ್ನು ಹೊರಹಾಕಿದ್ದಾರೆ.
ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ವಿರುದ್ಧ ಅಸಮಾಧಾನಗೊಂಡ ಕಾರ್ಯಕರ್ತರು ಅವರ ಕಾರಿನ ಗಾಳಿತೆಗೆದು ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಆಕ್ರೋಶ ಗೊಂಡ ಕಾರ್ಯಕರ್ತರ ಚದುರಿಸಲು ಪೊಲೀಸರು ಲಘು ಲಾಠಿ ಚಾರ್ಜ್ ಮಾಡಿದ್ದರೆ.
ಕಠಿಣ ಕ್ರಮದ ಹೇಳಿಕೆಗಷ್ಟೆ ಬಿಜೆಪಿ ಸರ್ಕಾರ ಇದೆ. ಕಾರ್ಯಕರ್ತರ ಜೀವದ ಜೊತೆ ಚೆಲ್ಲಾಟ ಆಡುತ್ತಿದ್ದಾರೆ. ವಾಜಪೇಯಿ, ಅಡ್ವಾಣಿ ಹೆಸರನ್ನು ಹಾಳು ಮಾಡಲಾಗುತ್ತಿದ್ದು, ಅವರು ಕಟ್ಟಿದ ಪಕ್ಷಕ್ಕೆ ಅವಮಾನ ಮಾಡದೇ ಇನ್ನು ಮುಂದಾದರೂ ಬಿಜೆಪಿ ಕಾರ್ಯಕರ್ತರನ್ನು ಉಳಿಸಿಕೊಂಡು ಹತ್ಯೆ ಮಾಡುವವರ ವಿರುದ್ಧ ಕೈಗೊಳ್ಳಿ ಎಂದು ಆಗ್ರಹಿಸಿದ್ದಾರೆ.
ರಾಜ್ಯ ಹಾಗೂ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದ್ದರೂ ಪಕ್ಷದ ಕಾರ್ಯಕರ್ತನನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ ಏಕೆ ಎಂದು ಪ್ರಶ್ನಿಸಿದರು. ಪಕ್ಷದ ಅಮಾಯಕ ಕಾರ್ಯಕರ್ತನ ಸಾವಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.