ಮಂಗಳೂರು: ನಾಳೆ (ಜುಲೈ 28) ಜಿಲ್ಲಾ ಬಂದ್ ಗೆ ಕರೆ ಕೊಟ್ಟಿಲ್ಲ- ಸ್ಪಷ್ಟನೆ

ಮಂಗಳೂರು, ಜು 27: ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆಯ ಖಂಡಿಸಿ ದ.ಕ. ಜಿಲ್ಲೆಯಲ್ಲಿ ವಿವಿಧ ಹಿಂದೂ ಸಂಘಟನೆಗಳು ಬಂದ್ ಕರೆ ನೀಡಲಾಗಿದೆ ಎನ್ನುವ ಸುಳ್ಳು ಸುದ್ದಿ ಹರಿದಾಡಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ಗುರುವಾರದಂದು ದ.ಕ. ಜಿಲ್ಲೆ ಬಂದ್ ಗೆ ವಿಹೆಚ್ ಪಿ ಬಜರಂಗ ದಳ ಕರೆ ನೀಡಿದೆ ಎನ್ನುವ ವಿಚಾರವೊಂದು ಹರಿದಾಡಿದ್ದು, ಈ ಬಗ್ಗೆ ಜುಲೈ 28ರಂದು ದ.ಕ. ಜಿಲ್ಲೆಯಲ್ಲಿ ಯಾವುದೇ ರೀತಿಯ ಬಂದ್ ಗೆ ಯಾವುದೇ ಹಿಂದೂ ಸಂಘಟನೆಗಳು ಕರೆಕೊಟ್ಟಿಲ್ಲ ಎಂದು ವಿಹೆಚ್ ಪಿ, ಬಜರಂಗದಳ, ಹಿಂದೂ ಜಾಗರಣ ವೇದಿಕೆ ಸ್ಪಷ್ಟಪಡಿಸಿದೆ.

ಬಜರಂಗ ದಳದ ಮುಖಂಡ ಶರಣ್ ಪಂಪ್ ವೆಲ್, ಪುನೀತ್ ಅತ್ತಾವರ, ಹಿಂದೂ ಜಾಗರಣಾ ವೇದಿಕೆಯ ಮುಖಂಡ ಗಣೇಶ್ ಕೆದಿಲ ಸ್ಪಷ್ಟಪಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!