ದಿ ಮೈಸೂರ್ ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ನ ನೂತನ ಅಧ್ಯಕ್ಷರಾಗಿ ಕೆ.ಉದಯ ಕುಮಾರ್ ಶೆಟ್ಟಿ ನೇಮಕ
ಉಡುಪಿ ಜು.28: ದಿ ಮೈಸೂರ್ ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ನ ನೂತನ ಅಧ್ಯಕ್ಷರಾಗಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ.
ಈ ಬಗ್ಗೆ ಸರಕಾರ ಆದೇಶ ಹೊರಡಿಸಿದ್ದು, ಕೆ.ಉದಯ್ ಕುಮಾರ್ ಶೆಟ್ಟಿ ಅವರು ಈ ಹಿಂದೆ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು ಕಳೆದ ಎರಡು ದಶಕಗಳಿಂದ ಪಕ್ಷದಲ್ಲಿ ಸಕ್ರಿಯರಾಗಿದ್ದಾರೆ.
ಕೋವಿಡ್ ಸಂದರ್ಭದಲ್ಲಿ ತಮ್ಮ ಕೆ.ಉದಯ್ ಕುಮಾರ್ ಫ್ಯಾಮಿಲಿ ಟ್ರಸ್ಟ್ ಮುಖಾಂತರ ಸಾವಿರಾರು ಬಡ ಕುಟುಂಬಕ್ಕೆ ಆಹಾರ ಧಾನ್ಯಗಳ ಕಿಟ್ ವಿತರಿಸಿದ್ದರು. ಜಿಲ್ಲೆಯಾದ್ಯಂತ ನಡೆಯುವ ಕ್ರೀಡೆ, ಸಾಂಸ್ಕೃತಿಕ, ಸಮಾಜಮುಖಿ ಕಾರ್ಯಕ್ರಮಗಳಿಗೆ ತಮ್ಮ ಟ್ರಸ್ಟ್ ಮೂಲಕ ಸಹಾಯಹಸ್ತ ನೀಡುತ್ತ ಬಂದಿದ್ದು ಮಾತ್ರವಲ್ಲದೆ, ಬಡಮಕ್ಕಳ ವಿದ್ಯಾಭ್ಯಾಸ, ಅಶಕ್ತ ಕುಟುಂಬಗಳ ವೈದ್ಯಕೀಯ ವೆಚ್ಚಗಳನ್ನು ಭರಿಸಿ ಯಾವುದೇ ಪ್ರಚಾರ ಬಯಸದೆ ಸದ್ದಿಲ್ಲದೆ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ.