ಮಂಗಳೂರು: 4 ತಾಲೂಕುಗಳಲ್ಲಿ ಮದ್ಯ ಮಾರಾಟ ಬಂದ್- ಜಿಲ್ಲಾಧಿಕಾರಿ ಆದೇಶ
ಮಂಗಳೂರು: ದಕ್ಷಿಣ ಕನ್ನಡ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮುನ್ನೆಚ್ಚರಿಕಾ ಕ್ರಮವಾಗಿ ಮದ್ಯ ಮಾರಾಟ ಮತ್ತು ಸಾಗಾಣಿಕೆಯನ್ನು ಜಿಲ್ಲೆಯ 4 ತಾಲೂಕುಗಳಲ್ಲಿ ಶುಕ್ರವಾರ(ಜುಲೈ29) ಮಧ್ಯರಾತ್ರಿವರೆಗೆ ಬಂದ್ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಇಂದು ಆದೇಶ ಹೊರಡಿಸಿದ್ದಾರೆ.
ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಬಿಗುವಿನ ವಾತಾವಣರ ಉಂಟಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಸುಳ್ಯ, ಪುತ್ತೂರು, ಕಡಬ, ಬಂಟ್ವಾಳ ತಾಲೂಕುಗಳಲ್ಲಿ ಮದ್ಯ ಮಾರಾಟ ಮತ್ತು ಸಾಗಾಣಿಕೆ ಶುಕ್ರವಾರ ರಾತ್ರಿ 12 ಗಂಟೆವರೆಗೆ ಬಂದ್ ಮಾಡಲಾಗಿದ್ದು ಎಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.