ಕಾಂಗ್ರೆಸ್ ಸರ್ಕಾರದಲ್ಲಿ ಹತ್ಯೆಯಾಗಿದ್ದರೆ ಕಲ್ಲು ಹೊಡೆಯಬಹುದಿತ್ತು- ಸಂಸದ ತೇಜಸ್ವಿ ಸೂರ್ಯ

ಚಿಕ್ಕಮಗಳೂರು ಜು.28: ಸರ್ಕಾರ ನಮ್ಮದೆ ಇದೆ. ಒಂದು ವೇಳೆ ಕಾಂಗ್ರೆಸ್ ಸರ್ಕಾರದಲ್ಲಿ ಹತ್ಯೆಯಾಗಿದ್ದರೆ ಕಲ್ಲು ಹೊಡೆಯಬಹುದಿತ್ತು ಎಂದಿರುವ ಸಂಸದ ತೇಜಸ್ವಿ ಸೂರ್ಯ ಅವರದ್ದು ಎನ್ನಲಾದ ಆಡಿಯೋವೊಂದು ಇದೀಗ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದೆ.

ಮಾಧ್ಯಮದ ವರದಿಗಳ ಪ್ರಕಾರ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂದೀಪ್ ಹಾಗೂ ಸಂಸದ ತೇಜಸ್ವಿ ಸೂರ್ಯ ನಡುವೆ ಫೋನ್ ಮೂಲಕ ನಡೆದಿದೆ ಎನ್ನಲಾದ ಕಾರ್ಯಕರ್ತರ ರಾಜೀನಾಮೆ ವಿಚಾರವಾದ ಸಂಭಾಷಣೆಸಿದಾಗಿದ್ದು, ಇದರಲ್ಲಿ ತೇಜಸ್ವಿ ಸೂರ್ಯ ಅವರು ರಾಜಿನಾಮೆಯನ್ನು ಹಿಂಪಡೆಯುವಂತೆ ಕೇಳಿಕೊಂಡಿದ್ದಾರೆ. ಹಾಗೂ ಈ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಮಾತನಾಡುವ ಎಂದೂ ತಿಳಿಸಿದ್ದಾರೆ. ಇದೇ ವೇಳೆ ಅವರು ನಿಮಗೆ ಎಷ್ಟು ಆಕ್ರೋಶ ಇದೆಯೋ ನಮಗೂ ಅಷ್ಟೇ ಆಕ್ರೋಶ ಇದೆ. ಏನು ಮಾಡೋದು ಸರ್ಕಾರ ನಮ್ಮದೆ ಇದೆ. ಒಂದು ವೇಳೆ ಕಾಂಗ್ರೆಸ್ ಸರ್ಕಾರದಲ್ಲಿ ಹತ್ಯೆಯಾಗಿದ್ದರೆ ಕಲ್ಲು ಹೊಡೆಯಬಹುದಿತ್ತು ಎಂದು ಹೇಳಿದ್ದಾರೆ.

ಈ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ತೇಜಸ್ವಿ ಸೂರ್ಯ ಅವರದ್ದು ಎನ್ನಲಾದ ಈ ಹೇಳಿಕೆ ಬಾರೀ ಚರ್ಚೆ ಹಾಗೂ ಟೀಕೆಗೆ ಕಾರಣವಾಗಿದೆ. 

1 thought on “ಕಾಂಗ್ರೆಸ್ ಸರ್ಕಾರದಲ್ಲಿ ಹತ್ಯೆಯಾಗಿದ್ದರೆ ಕಲ್ಲು ಹೊಡೆಯಬಹುದಿತ್ತು- ಸಂಸದ ತೇಜಸ್ವಿ ಸೂರ್ಯ

Leave a Reply

Your email address will not be published. Required fields are marked *

error: Content is protected !!