ಪ್ರವೀಣ್ ಹತ್ಯಾ ಆರೋಪಿ ಕೆಲಸ ಮಾಡುತ್ತಿದ್ದ ಅಂಗಡಿಗೆ ದಾಳಿ
ಸುಳ್ಯ ಜು.28: ಪ್ರವೀಣ್ ನೆಟ್ಟಾರು ಹತ್ಯೆಯಿಂದ ಆಕ್ರೋಶಿತ ಗೊಂಡಿರುವ ಹಿಂದೂ ಸಂಘಟನೆಗಳ ಕಾರ್ಯಕರ್ತರು ಆರೋಪಿ ಕೆಲಸ ಮಾಡುತ್ತಿದ್ದ ಅಂಗಡಿ ಸೇರಿದಂತೆ ಸುಳ್ಯದ ಗುತ್ತಿಗಾರಿನಲ್ಲಿ ಹಲವೆಡೆ
ಮುಸ್ಲಿಂ ಅಂಗಡಿಗಳ ಮೇಲೆ ದಾಳಿ ನಡೆಸಿದ್ದು, ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿರುವ ಘಟನೆ ನಡೆದಿದೆ.
ಸುಮಾರು 50ಕ್ಕೂ ಹೆಚ್ಚು ಕಾರ್ಯಕರ್ತರು ಗುತ್ತಿಗಾರಿನ ಪ್ರಗತಿ ಸುಫಾರಿ ಟ್ರೇಡರ್ಸ್, ಪ್ರಗತಿ ಸ್ಟೋರ್ ಸೇರಿದಂತೆ ಬಹುತೇಕ ಮುಸ್ಲಿಂ ಅಂಗಡಿಗಳ ಮೇಲೆ ದಾಳಿ ನಡೆಸಿ ದಾಂಧಲೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.