ಪ್ರವೀಣ್ ಹತ್ಯೆ ಪ್ರಕರಣದ ತನಿಖೆಗೆ ಪೊಲೀಸರಿಗೆ ಮುಕ್ತ ಅವಕಾಶ- ಸಿಎಂ ಬೊಮ್ಮಾಯಿ

ದ.ಕ ಜು.28(ಉಡುಪಿ ಟೈಮ್ಸ್ ವರದಿ): ಪ್ರವೀಣ್ ನೆಟ್ಟಾರು ಅವರ ಹತ್ಯೆ ಪ್ರಕರಣದ ತನಿಖೆಗೆ ಪೊಲೀಸರಿಗೆ ಮುಕ್ತ ಅವಕಾಶ ನೀಡಿದ್ದೇವೆ ಎಂದು ಮುಖಮಂತ್ರಿ ಬಸವರಾಜ ಬೊಮ್ಮಾಯಿ ಅವರು  ಹೇಳಿದ್ದಾರೆ.

ಮಂಗಳವಾರ ರಾತ್ರಿ ಹತ್ಯೆಯಾದ ಪ್ರವೀಣ್ ನೆಟ್ಟಾರು ಅವರ ಮನೆಗೆ ಭೇಟಿ ನೀಡುವ ಸಲುವಾಗಿ ಇಂದು ದ.ಕ ಜಿಲ್ಲೆಗೆ ಬಂದ ಅವರು ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾತನಾಡಿ,ಪ್ರಕರಣದ ತನಿಖೆಗೆ ಮುಕ್ತ ಅವಕಾಶ ನೀಡಿದ್ದೇವೆ. ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಉಳಿದ ಆರೋಪಿಗಳ ಬಂಧನಕ್ಕೆ ಕಾರ್ಯಾಚರಣೆ ನಡೆಯುತ್ತಿದ್ದು. ಎಲ್ಲಾ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾತ್ತದೆ ಎಂದು ಭರವಸೆ ನೀಡಿದರು.

ಘಟನೆ ಬಳಿಕ ಪೊಲೀಸರ ಜೊತೆ ನಿರಂತರ ಸಂಪರ್ಕದಲ್ಲಿ ಇದ್ದೇವೆ. ರಾಜ್ಯ ಪೊಲೀಸರು ಕಾಸರಗೋಡು ಪೊಲೀಸರ ಜೊತೆಗೆ ಸಂಪರ್ಕದಲ್ಲಿದ್ದು, ಕೇರಳ ಪೊಲೀಸರು ತನಿಖೆ ಗೆ ಸೂಕ್ತ ಸಹಕಾರ ನೀಡುತ್ತಿದ್ದಾರೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!