ಮಂಗಳೂರು: ವಿಮಾನ ನಿಲ್ದಾಣಕ್ಕೆ ಮತ್ತೆ ಹುಸಿ ಬಾಂಬ್ ಬೆದರಿಕೆ ಕರೆ
ಮಂಗಳೂರು(ಉಡುಪಿ ಟೈಮ್ಸ್ ವರದಿ): ಬಜ್ಪೆ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದು ಸಿಐಎಸ್ ಎಫ್, ಭದ್ರತಾ ಪಡೆಗಳು ಸಂಪೂರ್ಣ ಪರಿಶೀಲನೆ ನಡೆಸಿದ್ದು. ಇದೊಂದು ಹುಸಿ ಬೆದರಿಕೆ ಕರೆ ಎಂದು ತಿಳಿದು ಬಂದಿದ್ದು ನಿಲ್ದಾಣದಲ್ಲಿ ಭದ್ರತಾ ತಪಾಸಣೆ ಹೆಚ್ಚಿಸಲಾಗಿದೆ.
ಬಜ್ಪೆ ವಿಮಾನ ನಿಲ್ದಾಣದಲ್ಲಿ ಈ ಹಿಂದೆ ಮಣಿಪಾಲದ ಆದಿತ್ಯ ರಾವ್ ಎಂಬಾತ ಬಾಂಬ್ ಮಾದರಿಯ ಸ್ಫೋಟಕ ಇರಿಸಿ ಗೊಂದಲ ಸೃಷ್ಟಿಯಾಗಿ,ಜನ ಅಂತಕಕ್ಕೆ ಒಳಪಟ್ಟಿದ್ದರು.
ಬಳಿಕ ಇಂದು ಮತ್ತೆ ಕಿಡಿಗೇಡಿಗಳು ಬಾಂಬ್ ಇಟ್ಟಿರುವುದಾಗಿ ಕರೆ ಮಾಡಿದ್ದಾರೆ . ಸಂಪೂರ್ಣ ವಿಮಾನ ನಿಲ್ದಾಣವನ್ನು ತಪಾಸಣೆ ನಡೆಸಿದ್ದು,ಈ ವೇಳೆ ಯಾವುದೇ ಶಂಕಿತ ವಸ್ತು ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.