ಉಡುಪಿ: ಪುತ್ತಿಗೆ ಮಠದ 7 ಲಕ್ಷ ರೂ. ಮೌಲ್ಯದ  ಚಿನ್ನದ ಗಿಂಡಿ ಕಳವು

ಉಡುಪಿ ಜು.29(ಉಡುಪಿ ಟೈಮ್ಸ್ ವರದಿ): ನಗರದ ಶ್ರೀ ಕೃಷ್ಣ ಮಠದ ಪುತ್ತಿಗೆ ಮಠದಲ್ಲಿ 7 ಲಕ್ಷ ರೂ. ಮೌಲ್ಯದ  ಚಿನ್ನದ ಗಿಂಡಿ ಕಳವಾಗಿರುವ ಘಟನೆ ನಡೆದಿದೆ.

ಜು.26 ರಂದು ಬೆಳಿಗ್ಗೆ ಮಠದಲ್ಲಿ ಪೂಜೆಯ ಸಂದರ್ಭದಲ್ಲಿ 6 ಜನ ಮಠದ ವಿದ್ಯಾರ್ಥಿಗಳು ಮತ್ತು ಪುರೋಹಿತ ಲಕ್ಷ್ಮಿ ಪ್ರಸಾದ್ ರವರು ಬಂದು ಹೋಗಿದ್ದು, ಪೂಜೆಯ ನಂತರ ಪೂಜಾ ಸಾಮಾಗ್ರಿಗಳನ್ನು ತೆಗೆದು ಇಡುವಾಗ 7 ಲಕ್ಷ ರೂಪಾಯಿ ಮೌಲ್ಯದ 146 ಗ್ರಾಂ ತೂಕದ ಚಿನ್ನದ ಗಿಂಡಿ ಕಾಣೆಯಾಗಿದ್ದು ಗಮನಕ್ಕೆ ಬಂದಿದೆ. ಈ ಚಿನ್ನದ ಗಿಂಡಿಯನ್ನು ಪುರೋಹಿತ ಲಕ್ಷ್ಮಿ ಪ್ರಸಾದ್ ರವರು ಕಳವು ಮಾಡಿಕೊಂಡು ಹೋಗಿರುವ ಬಗ್ಗೆ ಅನುಮಾನ ಇರುವುದಾಗಿ ಪುತ್ತಿಗೆ ಮಠದಲ್ಲಿ ವ್ಯವಸ್ಥಾಪಕರಾಗಿರುವ ವಿಷ್ಣುಮೂರ್ತಿ ಇವರು ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!