ಶಂಕರನಾರಾಯಣ: ನಿದ್ರೆ ಮಾತ್ರೆ ಸೇವಿಸಿ ಅಸ್ವಸ್ಥಗೊಂಡಿದ್ದ ವ್ಯಕ್ತಿ ಸಾವು
ಶಂಕರನಾರಾಯಣ ಜು.29( ಉಡುಪಿ ಟೈಮ್ಸ್ ವರದಿ): ಕುಂದಾಪುರ ತಾಲೂಕಿನ ಕೊಡ್ಲಾಡಿ ಗ್ರಾಮದ ಕೆಳ ಬಾಂಡ್ಯ ಸಸಿ ಹಿತ್ಲು ಎಂಬಲ್ಲಿ ನಿದ್ರೆ ಮಾತ್ರೆ ಸೇವಿಸಿ ಅಸ್ವಸ್ಥ ಗೊಂಡಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ
ಸ್ಥಳೀಯ ನಿವಾಸಿ ಗುಂಡು ಪೂಜಾರಿ (51) ಮೃತಪಟ್ಟವರು. ಇವರು ಸುಮಾರು 18 ವರ್ಷಗಳಿಂದ ಮಾನಸಿಕ ಅಸ್ವಸ್ಥ್ಯತೆಯಿಂದ ಬಳಲುತ್ತಿದ್ದು ಇದಕ್ಕಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಜು.25 ರಂದು ಕುಂದಾಪುರ ತಾಲೂಕಿನ ಕೊಡ್ಲಾಡಿ ಗ್ರಾಮದ ಕೆಳ ಬಾಂಡ್ಯ ಸಸಿ ಹಿತ್ಲು ಎಂಬಲ್ಲಿನ ತಮ್ಮ ಮನೆಯಲ್ಲಿ ನಿದ್ರೆ ಮಾತ್ರೆಯನ್ನು ನುಂಗಿ ಅಸ್ವಸ್ಥಗೊಂಡಿದ್ದರು. ಈ ವೇಳೆ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ನಿನ್ನೆ ರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ಮೃತ ಪಟ್ಟಿದ್ದಾರೆ ಎಂಬುದಾಗಿ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆಯೊಂದೇ ಪರಿಹಾರವಲ್ಲ. ಆತ್ಮಹತ್ಯೆ ಮಾಡಿಕೊಳ್ಳುವ ಸಂಭವನೀಯ ವ್ಯಕ್ತಿಗಳ ಗಮನಕ್ಕೆ. ಸಹಾಯವಾಣಿ ನಂಬರ್ : 080 2572 2573, ಸಮರ್ಥನಂ ಆವರಣ, 15ನೇ ಕ್ರಾಸ್, ಹೆಚ್‍ಎಸ್‍ಆರ್ ಸೆಕ್ಟರ್- 4, ಬೆಂಗಳೂರು.