ಕೋಟ: ಸಾಪ್ಟ್ ವೇರ್ ಉದ್ಯೋಗಿ ನೇಣಿಗೆ ಶರಣು
ಕೋಟ ಜು.29(ಉಡುಪಿ ಟೈಮ್ಸ್ ವರದಿ): ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸೊಸೈಟಿಗಳಿಗೆ ಸಾಪ್ಟ್ ವೇರ್ ಇನ್ ಸ್ಟಾಲ್ ಮಾಡುವ ಕೆಲಸ ಮಾಡಿಕೊಂಡಿದ್ದ ರಂಜನ್ ಜಿ. (33 ) ಆತ್ಮಹತ್ಯೆ ಮಾಡಿಕೊಂಡವರು. ಇವರು ಯಾವುದೋ ಕಾರಣಕ್ಕೆ ತೀರಾ ಮನನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ಇಂದು ಬೆಳಿಗ್ಗೆ ತಾವು ವಾಸವಿದ್ದ ಮನೆಯ ಮಲಗುವ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಸುರೇಶ್ ಜಿ. ಎಂಬವರು ನೀಡಿದ ದೂರಿನಂತೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆಯೊಂದೇ ಪರಿಹಾರವಲ್ಲ. ಆತ್ಮಹತ್ಯೆ ಮಾಡಿಕೊಳ್ಳುವ ಸಂಭವನೀಯ ವ್ಯಕ್ತಿಗಳ ಗಮನಕ್ಕೆ, ಸಹಾಯವಾಣಿ ನಂಬರ್ : 080 2572 2573, ಸಮರ್ಥನಂ ಆವರಣ, 15ನೇ ಕ್ರಾಸ್, ಹೆಚ್‍ಎಸ್‍ಆರ್ ಸೆಕ್ಟರ್- 4, ಬೆಂಗಳೂರು.