ಪತ್ರಕರ್ತರಿಗೆ ಹಲ್ಲೆಗೈದ ಮಾಜಿ ಸ್ಪೀಕರ್ ರಮೇಶ್ ಕುಮಾರ್
ಕೋಲಾರ: ಮಾಜಿ ಸ್ಪೀಕರ್. ಕೆ.ಆರ್.ರಮೇಶ್ ಕುಮಾರ್ ಕೋಲಾರದಲ್ಲಿ ಪತ್ರಕರ್ತರ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಇಂದು ಕೋಲಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಿದ್ದರಾಮೋತ್ಸವ ಪೂರ್ವಭಾವಿ ಸಭೆ ಹಾಗೂ 75 ನೇ ವರ್ಷದ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಕುರಿತಾದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ್ದ ಅವರು, ಸಭೆಯಲ್ಲಿ ಕಾರ್ಯಕರ್ತರ ನಡುವಿನ ಗಲಾಟೆಯನ್ನು ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಇಬ್ಬರು ಪತ್ರಕರ್ತರ ಮೇಳೆ ಹಲ್ಲೆ ನಡೆಸಿದ್ದಾರೆ.
ಗಲಾಟೆಯ ದೃಶ್ಯ ಸೆರೆ ಹಿಡಿಯುವಾಗ ವರದಿಗಾರರ ಮೇಲೆ ಹಲ್ಲೆ ನಡೆಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸದ್ಯ ವೈರಲ್ ಆಗುತ್ತಿದೆ.
ರಮೇಶ್ ಕುಮಾರ್ ಗಲಾಟೆ ವೇಳೆ ಕಾರ್ಯಕರ್ತರನ್ನು ಸಮಾದಾನ ಪಡಿಸುವ ಬದಲಾಗಿ ಪತ್ರಕರ್ತರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ದೂರಲಾಗಿದೆ. ರಮೇಶ್ ಕುಮಾರ್ ಹಾಗೂ ಕೆ.ಎಚ್ ಮುನಿಯಪ್ಪ ಬಣದವರು ಕಿತ್ತಾಟ ಮಾಡುವ ವೇಳೆ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿತ್ತು. ಬ್ಯಾನರ್‌ನಲ್ಲಿ ಮುನಿಯಪ್ಪ ಫೋಟೋ ಇಲ್ಲದಿದಕ್ಕೆ ಗಲಾಟೆ ಶುರುವಾಗಿತ್ತು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರು ಭಾಗವಹಿಸಿ ರಮೇಶ್ ಕುಮಾರ್ ವಿರುದ್ಧ ಆಕ್ರೋಶ ಹೊರಹಾಕಿ ಘಟನೆಯನ್ನು ಖಂಡಿಸಿ ಪ್ರತಿಭಟಿಸಿದರು.