ಉಡುಪಿ: ಪ್ರವೀಣ್ ಹತ್ಯೆ ಖಂಡಿಸಿ ಕೊಡವೂರಿನಲ್ಲಿ ಅಘೋಷಿತ ಬಂದ್
ಉಡುಪಿ ಜು.30(ಉಡುಪಿ ಟೈಮ್ಸ್ ವರದಿ): ದ.ಕ ಜಿಲ್ಲೆಯ ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆಯನ್ನು ಖಂಡಿಸಿ ಕೊಡವೂರಿನಲ್ಲಿ ಅಘೋಷಿತ ಬಂದ್ ಆಚರಿಸಲಾಗುತ್ತಿದೆ.
ಜು.26 ರಂದು ರಾತ್ರಿ ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಬಳಿಕ ಕರಾವಳಿಯಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಉಡುಪಿಯಲ್ಲೂ ಹತ್ಯೆಯನ್ನು ಖಂಡಿಸಿ ಆಕ್ರೋಶ ವ್ಯಕ್ತವಾಗಿದ್ದು ಕೊಡವೂರಿನಲ್ಲಿ ಅಘೋಷಿತ ಬಂದ್ ವಾತಾವರಣ ನಿರ್ಮಾಣವಾಗಿದೆ.
ಕೊಡವೂರು ಪರಿಸರದಲ್ಲಿ ಇಂದು ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ಅಘೋಷಿತ ಬಂದ್ ನಡೆಸಲಾಗುತ್ತಿದ್ದು, ಮೆಡಿಕಲ್ ಹಾಗೂ ಅಗತ್ಯ ಸೇವೆ ಹೊರತು ಪಡಿಸಿ ಉಳಿದೆಲ್ಲಾ ಅಂಗಡಿ ಮುಂಗಟ್ಟುಗಳು ಬಂದ್ ಆಗಿದೆ.